ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ಪ್ರದಾನ
Anant Nag: ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.
ಗುಜರಾತ್: ಏಕ್ತಾ ನಗರದಲ್ಲಿ ಇಂದು ನಡೆದ 72 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಹಿರಿಯ ನಟ ಅನಂತ್ ನಾಗ್ (Anant Nag) ಅವರಿಗೆ, 2024ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.
ಡಾ.ರಾಜ್‌ಕುಮಾರ್ ಅವರ ಬಳಿಕ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದ ಕನ್ನಡದ ಎರಡನೇ ನಟ ಎಂಬ ಹಿರಿಮೆಗೆ ಪಾತ್ರರಾದರು.
'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಕೇಂದ್ರ ಸರ್ಕಾರವು ಈ ಪ್ರಶಸ್ತಿಯನ್ನು ಘೋಷಿಸಿತ್ತು. 78 ವರ್ಷದ ಅನಂತ್ ನಾಗ್ ಅವರು, 5 ದಶಕಗಳ ಸಿನಿ ಪಯಣದಲ್ಲಿ 250ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ಸೆ.4, 1948 ರಲ್ಲಿ ಅನಂತ್ ನಾಗ್ ಅವರು ಉತ್ತರ ಕನ್ನಡದ ಜಿಲ್ಲೆಯ ಶಿರಳ್ಳಿ ಎಂಬಲ್ಲಿ ಜನಿಸಿದ್ದು, 1973ರಲ್ಲಿ 'ಸಂಕಲ್ಪ' ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಿದ್ದರು. 2025 ರಲ್ಲಿ ಪದ್ಮಭೂಷಣ ಪ್ರಶಸ್ತಿಗೂ ಭಾಜನರಾಗಿದ್ದರು.
'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ'ಯು ಭಾರತೀಯ ಚಲನಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಗಾಗಿ ನೀಡುವ ಅತ್ಯುನ್ನತ ಗೌರವವಾಗಿದೆ. 1969ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು, ದೇಶದ ಮೊದಲ ಚಲನಚಿತ್ರ 'ರಾಜ ಹರಿಶ್ಚಂದ್ರ' ನಿರ್ದೇಶಿಸಿದ ದಾದಾಸಾಹೇಬ್ ಫಾಲ್ಕೆ ಅವರ ಸ್ಮರಣಾರ್ಥ ನೀಡಲಾಗುತ್ತದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.