ವಿದ್ವತ್ ಪಿಯು ಕಾಲೇಜಿನಲ್ಲಿ "ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಗಾರ

78ನೇ ಸ್ವಾತಂತ್ರ್ಯ ದಿನಾಚರಣೆಗೆ ವಿಭಿನ್ನ ಕಾರ್ಯಕ್ರಮ

Aug 16, 2024 - 18:27
Aug 16, 2024 - 19:37
 15
ವಿದ್ವತ್ ಪಿಯು ಕಾಲೇಜಿನಲ್ಲಿ "ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಗಾರ
independence day
ವಿದ್ವತ್ ಪಿಯು ಕಾಲೇಜಿನಲ್ಲಿ "ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಗಾರ

ಗುರುವಾಯನಕೆರೆ: ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.  

ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. 

ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡ ಅವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯ ಮಾಡಲು  “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ”ಎಂಬ ಶೀರ್ಷಿಕೆಯಡಿಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿತ್ತು. ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿತ್ತು. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿತ್ತು. 

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಿದರು. 

ಈ ಅಪರೂಪದ ಕಾರ್ಯಾಗಾರಕ್ಕೆ 7 ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂವಾದ ಕಾರ್ಯಗಾರದಲ್ಲಿ ಉತ್ತಮ ಪ್ರಶ್ನೆ ಕೇಳಿದ  ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಈ ಅರ್ಥಪೂರ್ಣ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.