ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಟೂರ್ನಿ: ವಿವೇಕಾನಂದ ಪಿಯು ಕಾಲೇಜು ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

Vidya Bharathi Shuttle Badminton Tournament: ಪುತ್ತೂರಿನಲ್ಲಿ ನಡೆದ 'ವಿದ್ಯಾಭಾರತಿ' ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.

Jul 30, 2026 - 15:00
ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಟೂರ್ನಿ: ವಿವೇಕಾನಂದ ಪಿಯು ಕಾಲೇಜು ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ವಿದ್ಯಾಭಾರತಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ. 

ಇತ್ತೀಚೆಗೆ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ 'ಅಂಬಿಕಾ ಪದವಿಪೂರ್ವ ಕಾಲೇಜು' ಸಹಯೋಗದಲ್ಲಿ ಈ ಟೂರ್ನಿ ನಡೆಯಿತು. 

ವಿವೇಕಾನಂದ ಕಾಲೇಜಿನ ಪರವಾಗಿ ಪ್ರಥಮ ಪಿಯು ವಿಜ್ಞಾನ ವಿಭಾಗ ವಿದ್ಯಾರ್ಥಿಗಳಾದ ಗಗನದೀಪ್ ಬಿ.ಎಂ, ಶಿವಕೀರ್ತನ್ ಕೆ, ಮನ್ವಿತ್ ಎನ್ ಮತ್ತು ವಾಣಿಜ್ಯ ವಿಭಾಗದ ಪ್ರಥಮ್ ಕಶ್ಯಪ್ ಕೆ.ಬಿ ಕಣಕ್ಕಿಳಿದ್ದರು. 

ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಅವರು ಈ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.