ವಿದ್ಯಾಮಾತಾ ಅಕಾಡೆಮಿ: ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಪ್ರಾರಂಭ

Vidyamaatha Academy: ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರಿಕ್ಷೆಗಳ ತರಬೇತಿ ಸಂಸ್ಥೆ 'ವಿದ್ಯಾಮಾತಾ ಅಕಾಡೆಮಿ' ಅಗ್ನಿವೀರ್, ಪೊಲೀಸ್ ಕಾನ್‌ಸ್ಟೆಬಲ್ & ಫಾರೆಸ್ಟ್ ವಾಚರ್ ಹುದ್ದೆಗಳ ನೇಮಕಾತಿಗೆ ಸಿದ್ಧರಾಗುತ್ತಿರುವ ಅಭ್ಯರ್ಥಿಗಳಿಗಾಗಿ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿಯನ್ನು ಪ್ರಾರಂಭಿಸಿದೆ.

Aug 12, 2026 - 11:09
ವಿದ್ಯಾಮಾತಾ ಅಕಾಡೆಮಿ: ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಪ್ರಾರಂಭ

ಪುತ್ತೂರು: ಇಲ್ಲಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರಿಕ್ಷೆಗಳ ತರಬೇತಿ ಸಂಸ್ಥೆ 'ವಿದ್ಯಾಮಾತಾ ಅಕಾಡೆಮಿ' ಅಗ್ನಿವೀರ್, ಪೊಲೀಸ್ ಕಾನ್‌ಸ್ಟೆಬಲ್ & ಫಾರೆಸ್ಟ್ ವಾಚರ್ ಹುದ್ದೆಗಳ ನೇಮಕಾತಿಗೆ ಸಿದ್ಧರಾಗುತ್ತಿರುವ ಅಭ್ಯರ್ಥಿಗಳಿಗಾಗಿ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿಯನ್ನು ಪ್ರಾರಂಭಿಸಿದೆ.

ನೇಮಕಾತಿ ಪ್ರಕ್ರಿಯೆ ಸಂಬಂಧ ದೈಹಿಕ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವವರು ಮತ್ತು ಸಶಸ್ತ್ರ ಪಡೆಗಳಿಗೆ ಸೇರ್ಪಡೆಯಾಗಲು ತಯಾರಾಗುತ್ತಿರುವ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಸ್ಥೆಯು ತಿಳಿಸಿದೆ.  

ತರಬೇತಿಯ ಹೈಲೈಟ್:

ಉಚಿತ ವಸತಿ: ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಚಿತ ವಸತಿ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ.

ತರಬೇತಿ ಸಮಯ: ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಪ್ರತಿದಿನ ಬೆಳಿಗ್ಗೆ, ಸಾಯಂಕಾಲ ಅಥವಾ ಪ್ರತಿ ಭಾನುವಾರ ಬೆಳಗ್ಗೆ ನುರಿತ ತರಬೇತುದಾರರ ತಂಡದಿಂದ ವಿಶೇಷ ತರಬೇತಿ ನೀಡಲಾಗುತ್ತದೆ. 

ಬೆಳಗ್ಗೆ ತರಬೇತಿ ಮುಗಿಸಿಕೊಂಡು ಕಾಲೇಜಿಗೆ ಅಥವಾ ಉದ್ಯೋಗಕ್ಕೆ ತೆರಳಿ ಸಂಜೆ ಬಂದು ತರಬೇತಿಯಲ್ಲಿ ಭಾಗವಹಿಸಿ, ವಸತಿ ವ್ಯವಸ್ಥೆಯ ಸದುಪಯೋಗಪಡಿಸಿಕೊಳ್ಳಬಹುದು. 

ಸಂಸ್ಥೆಯ ಸಾಧನೆ: ಕಳೆದ 4 ವರ್ಷಗಳಿಂದ 'ವಿದ್ಯಾಮಾತಾ ಅಕಾಡೆಮಿ'ಯ 64ಕ್ಕೂ ಅಧಿಕ ಅಭ್ಯರ್ಥಿಗಳು ಸೇನಾ ಪಡೆ, ಅರೆಸೇನಾ ಪಡೆ , ಪೊಲೀಸ್ ಹಾಗೂ ಅರಣ್ಯ ನೇಮಕಾತಿಗಳಿಗೆ ಆಯ್ಕೆಯಾಗಿದ್ದಾರೆ.

ನೋಂದಣಿ & ಸಂಪರ್ಕ ಮಾಹಿತಿ: ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳು, ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ 'ವಿದ್ಯಾಮಾತಾ ಅಕಾಡೆಮಿ'ಯ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಮೊಬೈಲ್ ಸಂಖ್ಯೆ: 9620468869ನ್ನು ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.