'ವಿದ್ಯಾಮಾತಾ ಅಕಾಡೆಮಿ' ವಿದ್ಯಾರ್ಥಿನಿ ಜಯಪ್ರಭಾ ಬ್ಯಾಂಕ್ ಆಫ್ ಬರೋಡಕ್ಕೆ ಆಯ್ಕೆ

Vidyamata Academy: ವಿದ್ಯಾಮಾತಾ ಅಕಾಡೆಮಿ' ವಿದ್ಯಾರ್ಥಿನಿ ಜಯಪ್ರಭಾ ಕೆ ಅವರು, ಬ್ಯಾಂಕ್ ಆಫ್ ಬರೋಡ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬ್ಯಾಂಕಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ.

Aug 5, 2026 - 19:39
'ವಿದ್ಯಾಮಾತಾ ಅಕಾಡೆಮಿ' ವಿದ್ಯಾರ್ಥಿನಿ ಜಯಪ್ರಭಾ ಬ್ಯಾಂಕ್ ಆಫ್ ಬರೋಡಕ್ಕೆ ಆಯ್ಕೆ

ಪುತ್ತೂರು: ಇಲ್ಲಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ 'ವಿದ್ಯಾಮಾತಾ ಅಕಾಡೆಮಿ' ವಿದ್ಯಾರ್ಥಿನಿ ಜಯಪ್ರಭಾ ಕೆ ಅವರು, ಬ್ಯಾಂಕ್ ಆಫ್ ಬರೋಡ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬ್ಯಾಂಕಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಮುಂಡೂರು ಗ್ರಾಮದ ಕೊಡೆಂಕೇರಿ ನಿವಾಸಿ ಪದ್ಮನಾಭ ಅವರ ಪುತ್ರಿಯಾಗಿರುವ ಜಯಪ್ರಭಾ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಇತ್ತೀಚೆಗೆ ಭಾರತೀಯ ವಾಯುಸೇನೆಯ 'AFCAT' ಪರೀಕ್ಷೆಯಲ್ಲೂ ಅರ್ಹತೆ ಗಿಟ್ಟಿಸಿಕೊಂಡಿದ್ದರು. ಈ ಮೂಲಕ 'ಅಕಾಡೆಮಿ'ಯ ಕೀರ್ತಿ ಹೆಚ್ಚಿಸಿದ್ದು, ಪೋಷಕರಿಗೂ ಗೌರವವನ್ನು ತಂದಿದ್ದಾರೆ. 

ಫಾರ್ಮಸಿ ವಿಷಯದಲ್ಲಿ ಪದವಿ ಪಡೆದಿರುವ ಅವರು, ಅಪ್ಪಟ ಗ್ರಾಮೀಣ ಪ್ರತಿಭೆಯಾಗಿದ್ದಾರೆ. 'ವಿದ್ಯಾಮಾತಾ ಅಕಾಡೆಮಿ'ಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ಪಡೆದುಕೊಂಡಿದ್ದರು.  

ಈ ಬಗ್ಗೆ 'ಅಕಾಡೆಮಿ'ಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಪ್ರತಿಕ್ರಿಯೆ ನೀಡಿದ್ದಾರೆ. 'ನಾವು ಒಂದೇ ಸೂರಿನಡಿ ನೀಡುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯು ಸಫಲತೆ ಕಂಡಿದೆ. ಬ್ಯಾಂಕ್ ಆಫ್ ಬರೋಡಕ್ಕೆ ನೇಮಕಗೊಂಡ ಜಯಪ್ರಭಾ, ಇನ್ನಷ್ಟು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮಾದರಿಯಾಗಿದ್ದಾರೆ. ಸದ್ಯ ನೇಮಕಾತಿ ಪರ್ವ ಪ್ರಾರಂಭಗೊಂಡಿದ್ದು, ಹೆಚ್ಚಿನ ಸ್ಪರ್ಧಾಳುಗಳಿಗೆ ತರಬೇತಿ ನೀಡಲು ಉತ್ಸಾಹ ಬಂದಿದೆ. ಮತ್ತಷ್ಟು ಅಭ್ಯರ್ಥಿಗಳು ನೇಮಕಗೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ' ಎಂದು ಹೇಳಿದ್ದಾರೆ. 

ಜಯಪ್ರಭಾ ಅವರ ಸಾಧನೆಗೆ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.