ವಿದ್ಯಾರಶ್ಮಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Vidyarashmi Vidyalaya: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

Aug 19, 2026 - 17:43
ವಿದ್ಯಾರಶ್ಮಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. 

ಸಂಸ್ಥೆಯ ಆಡಳಿತಾಧಿಕಾರಿ ಅಡ್ವೊಕೇಟ್ ಅಶ್ವಿನ್ ಎಲ್ ಶೆಟ್ಟಿ ಅವರು ಧ್ವಜಾರೋಹಣ ಮಾಡಿದರು. ಆ ಬಳಿಕ ಮಾತನಾಡಿ, 'ನಮಗೆ ದೊರೆತ ಸ್ವಾತಂತ್ರ್ಯದ ಮೌಲ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ತಿಳಿಸಿಕೊಳ್ಳಬೇಕು. ಈ ಮೂಲಕ ಉನ್ನತ ಸಾಧನೆ ಮಾಡಿ, ದೇಶದ ಕೀರ್ತಿಪತಾಕೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರಿಸಬೇಕು ಎಂದು ಹೇಳಿದರು. 

ಪ್ರಥಮ ವಾಣಿಜ್ಯ ವಿಭಾಗದ ಅಬ್ದುಲ್ ರಹ್ಮನುಲ್ ಫಾರಿಸ್ ಐ ನಿರೂಪಿಸಿದರು. ವಿದ್ಯಾರ್ಥಿ ಸಂಘದ ನಾಯಕಿ ದ್ವಿತೀಯ ಪಿಯುಸಿ ಶ್ರದ್ಧಾ ಕೆ.ಡಿ  ಸ್ವಾಗತಿಸಿದರು. ದ್ವಿತೀಯ ಪಿಯುಸಿ ಶ್ರೇಯ ಮತ್ತು ಬಳಗ ರಾಷ್ಟ್ರಗೀತೆ ಹಾಡಿದರು.

ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಸಫಾ ವಂದನಾರ್ಪಣೆ ಮಾಡಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ರಾಜಲಕ್ಷ್ಮಿ ಎಸ್ ರೈ,  ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಆಳ್ವ ಹಾಗೂ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.