ಕುರ್ಚಿ ಕಾದಾಟ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಭೇಟಿಯಾದ ವಿಜಯೇಂದ್ರ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಅವರು ಕ್ಷೇತ್ರದ ಹಲವು ಮುಖಂಡರೊಂದಿಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.

Oct 7, 2024 - 09:38
Oct 7, 2024 - 11:50
ಕುರ್ಚಿ ಕಾದಾಟ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಭೇಟಿಯಾದ ವಿಜಯೇಂದ್ರ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಅವರು ಕ್ಷೇತ್ರದ ಹಲವು ಮುಖಂಡರೊಂದಿಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ನಮ್ಮ ಕ್ಷೇತ್ರದ ಮುಖಂಡರೊಂದಿಗೆ ಸಚಿವರನ್ನು ಭೇಟಿ ಮಾಡಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಎರಡು ಹೈವೇ ಟೋಲ್‌ಗಳು ಬಂದಿವೆ. ಇದರಿಂದ ಮೂರು ಜಿಲ್ಲೆಗಳ ಜನರಿಗೆ ಸಮಸ್ಯೆ, ಬಡವರಿಗೆ ತೊಂದರೆ ಆಗುತ್ತಿದೆ. ಟೋಲ್ ಸ್ಥಳಾಂತರ ಮಾಡುವಂತೆ ಒತ್ತಾಯಿಸಿದ್ದೇವೆ. ಸಚಿವರು ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.ಈ ಭೇಟಿಯ ಸಮಯದಲ್ಲೇ ಜಾರಕಿಹೊಳಿ ಜೊತೆ ವಿಜಯೇಂದ್ರ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಮನವಿ ಸ್ವೀಕಾರದ ಬಳಿಕ ನಿಮ್ಮ ಜೊತೆಗೆ ಮಾತುಕತೆ ನಡೆಸಬೇಕು ಬನ್ನಿ ಸರ್ ಎಂದು ವಿಜಯೇಂದ್ರ ಜಾರಕಿಹೊಳಿ ಅವರನ್ನು ಕರೆದಿದ್ದಾರೆ. ಬಿವೈವಿ ಕರೆದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.