ಕರ್ನಾಟಕ ಕ್ರಿಕೆಟ್ ತಂಡಕ್ಕೆ ವಿನಯ್ ಕುಮಾರ್ ಹೊಸ ಸಾರಥಿ

Vinay Kumar: ದಾವಣಗೆರೆ ಎಕ್ಸ್‌ಪ್ರೆಸ್' ಖ್ಯಾತಿಯ ವಿನಯ್ ಕುಮಾರ್ ಕರ್ನಾಟಕ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.

Aug 14, 2026 - 18:13
ಕರ್ನಾಟಕ ಕ್ರಿಕೆಟ್ ತಂಡಕ್ಕೆ ವಿನಯ್ ಕುಮಾರ್ ಹೊಸ ಸಾರಥಿ

ಬೆಂಗಳೂರು: ಟೀಂ ಇಂಡಿಯಾದ ಮಾಜಿ ವೇಗಿ, 'ದಾವಣಗೆರೆ ಎಕ್ಸ್‌ಪ್ರೆಸ್' ಖ್ಯಾತಿಯ ವಿನಯ್ ಕುಮಾರ್ (Vinay Kumar) 'ಕರ್ನಾಟಕ' ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ರಾಜ್ಯ ಕ್ರಿಕೆಟ್ ಸಂಸ್ಥೆ ಅವರಿಗೆ ಈ ಜವಾಬ್ದಾರಿಯನ್ನು ವಹಿಸಿದೆ.

ಇತ್ತೀಚೆಗೆ 'ಮಹಾರಾಜ ಟಿ20 ಟ್ರೋಫಿ'ಯಲ್ಲಿ ಹುಬ್ಬಳ್ಳಿ ಟೈಗರ್ಸ್‌ನ ಮುಖ್ಯ ಕೋಚ್ ಆಗಿದ್ದರು. 'ಐಎಲ್‌ಟಿ 20'ಯಲ್ಲಿ ಎಂಐ ಎಮಿರೇಟ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

2021ರಲ್ಲಿ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದ ಅವರು, ತಮ್ಮ ವೃತ್ತಿಜೀವನದಲ್ಲಿ 139 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. 22.44 ಸರಾಸರಿಯಲ್ಲಿ ಬೌಲಿಂಗ್ ಮಾಡಿದ್ದು,  504 ವಿಕೆಟ್‌ಗಳನ್ನು ಪಡೆದಿದ್ದಾರೆ. ಭಾರತ ಪರವಾಗಿ ಒಂದು ಟೆಸ್ಟ್ ಹಾಗೂ 31 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. 

ರಣಜಿಯಲ್ಲಿ ಅದ್ಬುತ ಪ್ರದರ್ಶನ ತೋರಿಸಿರುವ ವಿನಯ್ ಕುಮಾರ್, 442 ವಿಕೆಟ್‌ಗಳನ್ನು ತೆಗೆದಿದ್ದಾರೆ. ಈ ಮೂಲಕ ದೇಶೀಯ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಐದನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ. 

ಐಪಿಎಲ್‌ನಲ್ಲೂ ಅಪಾರ ಅನುಭವ ಹೊಂದಿದ್ದಾರೆ. 2014ರಲ್ಲಿ ಚಾಂಪಿಯನ್ ಆಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು 2015, 2017ರಲ್ಲಿ ಟ್ರೋಫಿ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.