ವಿವೇಕಾನಂದ ಕಾಲೇಜು: ಎನ್‌ಸಿಸಿ ಘಟಕದಿಂದ ಅಭಿನಂದನಾ ಕಾರ್ಯಕ್ರಮ

Vivekananda College: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎನ್‌ಸಿಸಿ ಘಟಕದಿಂದ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Sep 25, 2026 - 18:48
Sep 25, 2026 - 18:48
ವಿವೇಕಾನಂದ ಕಾಲೇಜು: ಎನ್‌ಸಿಸಿ ಘಟಕದಿಂದ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಅದನ್ನು ಸಾಧಿಸುವಲ್ಲಿ ನಿರಂತರ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಮಡಿಕೇರಿಯ 19 ಕರ್ನಾಟಕ ಬೆಟಾಲಿಯನ್ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಹೇಳಿದರು. 

ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎನ್‌ಸಿಸಿ ಘಟಕದಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅವರು  ಮಾತನಾಡಿದರು.
 
ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರದೆ, ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಪಡಬೇಕು. ಯಾವುದೇ ಕಾರ್ಯವನ್ನು ಆರಂಭಿಸಿದ ಬಳಿಕ ಮಧ್ಯದಲ್ಲೇ ಕೈಬಿಡದೆ, ನಿರಂತರ ಪ್ರಯತ್ನದೊಂದಿಗೆ ಯಶಸ್ಸಿನತ್ತ ಸಾಗಬೇಕು. ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅಗತ್ಯವಿದೆ ಎಂದರು. 

ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ, ಶುಭ ಹಾರೈಸಿದರು.
 
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಕರ್ನಲ್ ಸಂಜೀವ್ ಕುಮಾರ್ ಹಾಗೂ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸೈನಿಕ ಶಿಬಿರದಲ್ಲಿ ಭಾಗವಹಿಸಿದ ಜೂನಿಯರ್ ಅಂಡರ್ ಆಫೀಸರ್ ಅಕ್ಷತಾ ಎ ಅವರನ್ನು ಸನ್ಮಾನಿಸಲಾಯಿತು.
  
ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅಥುಲ್ ಶೆಣೈ ಉಪಸ್ಥಿತರಿದ್ದರು. ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಮ ಭಟ್ ಸ್ವಾಗತಿಸಿ, ನಿರೂಪಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.