ವಿವೇಕಾನಂದ ಕಾಲೇಜು: 'ನಮಾಮಿ ಭಾರತಂ' ಸಮೂಹ ಗಾಯನ

Vivekananda College: ವಿವೇಕಾನಂದ ಕಾಲೇಜಿನಲ್ಲಿ 'ನಮಾಮಿ ಭಾರತಂ' ಸಮೂಹ ಗಾಯನವನ್ನು ಏರ್ಪಡಿಸಲಾಗಿತ್ತು.

Sep 27, 2026 - 13:00
ವಿವೇಕಾನಂದ ಕಾಲೇಜು: 'ನಮಾಮಿ ಭಾರತಂ' ಸಮೂಹ ಗಾಯನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 'ವಿದ್ಯಾಭಾರತಿ ಅಖಿಲ ಭಾರತೀಯ ವಿದ್ಯಾಸಂಸ್ಥಾನ' ವತಿಯಿಂದ, ವಂದೇ ಮಾತರಂ ರಾಷ್ಟ್ರೀಯ ಗೀತೆಯ 150ನೇ ವರ್ಷಾಚರಣೆ ಅಂಗವಾಗಿ 'ನಮಾಮಿ ಭಾರತಮಂ ಸಮೂಹ ಗಾಯನ' ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ವೇಳೆ ಕಾಲೇಜಿನ ಬಯಲು ರಂಗಮಂದಿರಲ್ಲಿ ಎಲ್ಲಾ ವಿದ್ಯಾರ್ಥಿಗಳು  'ವಂದೇ ಮಾತರಂ' ಗೀತೆಯನ್ನು ಸಾಮೂಹಿಕವಾಗಿ ಹಾಡಿದರು. 

ದೇಶಭಕ್ತಿ ಹಾಗೂ ರಾಷ್ಟ್ರ ಅಭಿಮಾನವನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ  ಕಾಲೇಜಿನ ಪ್ರಾಂಶುಪಾಲ ಪ್ರೊ ಶ್ರೀಕೃಷ್ಣ ಗಣರಾಜ ಭಟ್ ಎಸ್, ಐಕ್ಯೂಎಸಿ ಘಟಕದ ಸಂಯೋಜಕಿ & ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಮತ್ತು ಕಾಲೇಜಿನ ಆಡಳಿತ ಮಂಡಳಿಯ ವಿಶೇಷ  ಅಧಿಕಾರಿ ಡಾ.ಮನಮೋಹನ ಎಂ ಹಾಗೂ ಅಧ್ಯಾಪಕರು, ಅಧ್ಯಾಪಕೇತರರು, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1817 ಜನರು ಭಾಗವಹಿಸಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.