ವಿವೇಕಾನಂದ ಕಾಲೇಜು: 'ಪ್ರಕರ್ಷನ್' ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Vivekananda College: ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ 'ಪ್ರಕರ್ಷನ್' 3 ದಿನಗಳ ಸಾಮರ್ಥ್ಯ ವರ್ಧನಾ ಕಾರ್ಯಕ್ರಮ ನಡೆಯಿತು.

Nov 3, 2026 - 14:11
ವಿವೇಕಾನಂದ ಕಾಲೇಜು: 'ಪ್ರಕರ್ಷನ್' ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

ಪುತ್ತೂರು: ಕಲಿಯುವ ಇಚ್ಛೆ ಹಾಗೂ ಅಭ್ಯಾಸದ ಮನೋಭಾವದಿಂದ ಅಭಿವೃದ್ಧಿ ಸಾಧ್ಯ. ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ಪದವಿ ಮತ್ತು ಅಂಕಗಳಿಗಿಂತ ಆಲೋಚನಾ ಶಕ್ತಿ, ಸಂವಹನ ಕೌಶಲ್ಯ & ಸೃಜನಶೀಲತೆಗೆ ಹೆಚ್ಚಿನ ಮಹತ್ವವಿದೆ ಎಂದು ವಿವೇಕಾನಂದ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಹೇಳಿದರು. 

ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ 'ಪ್ರಕರ್ಷನ್' 3 ದಿನಗಳ ಸಾಮರ್ಥ್ಯ ವರ್ಧನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. 

ವಿದ್ಯಾರ್ಥಿಗಳು ಅಂಕಗಳಿಗೆ ಸೀಮಿತವಾಗದೆ, ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪ್ರಶ್ನೆಗಳು ಮೂಡಿದಾಗ, ಅದನ್ನು ಬಗೆಹರಿಸಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಕೌಶಲ್ಯಾಭಿವೃದ್ಧಿಯು ವಿದ್ಯಾರ್ಥಿಗಳ ವೃತ್ತಿಜೀವನದ ಜೊತೆಗೆ ದೇಶದ ಅಭಿವೃದ್ಧಿಗೂ ಸಹಕಾರಿಯಾಗಿದೆ ಎಂದು ತಿಳಿಸಿದರು. 

ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ್ ಭಟ್ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಬಿಎ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗಾಗಿ ಮೂರು ದಿನಗಳ ಸಾಮರ್ಥ್ಯ ವರ್ಧನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಮೂಲಕ ಒತ್ತಡ ನಿರ್ವಹಣೆ, ಸಂವಹನ, ಸಮಯ ನಿರ್ವಹಣೆ ಗಾಫ್ಯ್ಯ್ ತಂಡ ನಿರ್ಮಾಣದ ಕುರಿತು ತರಬೇತಿ ನೀಡಲಾಗುತ್ತದೆ. ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಪದವಿಗಿಂತ ಕೌಶಲ್ಯಗಳಿಗೆ ಹೆಚ್ಚಿನ ಮಹತ್ವವಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ ಕೌನ್ಸಿಲಿಂಗ್ ಸೈಕಾಲಜಿಸ್ಟ್ ಸಮಾಲೋಚನಾ ರಾಜೇಶ್ವರಿ ಉಪಸ್ಥಿತರಿದ್ದರು.

ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ರೇಖಾ ಪಿ ಸ್ವಾಗತಿಸಿದರು. ತೃತೀಯ ಬಿಬಿಎ ವಿಧ್ಯಾರ್ಥಿನಿ ಧನಲಕ್ಷ್ಮಿ ವಂದಿಸಿ, ನಿರೂಪಿಸಿದರು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.