ವಿವೇಕಾನಂದ ಕಾಲೇಜಿನ ರೋವರ್ಸ್ & ರೇಂಜರ್ಸ್ ವಿದ್ಯಾರ್ಥಿಗಳಿಂದ ಚಾರಣ - ಸ್ವಚ್ಛತಾ ಅಭಿಯಾನ
Vivekananda College: ವಿವೇಕಾನಂದ ಕಾಲೇಜಿನ ರೋವರ್ಸ್ & ರೇಂಜರ್ಸ್ ವಿದ್ಯಾರ್ಥಿಗಳಿಂದ ಚಾರಣ ಹಾಗೂ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕದ ವತಿಯಿಂದ, ಈಚೆಗೆ ಬಿರುಮಲೆ ಬೆಟ್ಟಕ್ಕೆ 1 ದಿನದ ಚಾರಣ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಸ್ವಚ್ಛತಾ ಅಭಿಯಾನವನ್ನು ನಡೆಲಾಯಿತು.
ರೋವರ್ಸ್ ಮತ್ತು ರೇಂಜರ್ಸ್ ತಂಡದ ವಿದ್ಯಾರ್ಥಿಗಳು ಚಾರಣದ ಮಾರ್ಗದುದ್ದಕ್ಕೂ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ಪ್ರವಾಸಿಗರು ಮತ್ತು ಸಾರ್ವಜನಿಕರು ಎಸೆದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕವರ್‌ಗಳು, ಆಹಾರದ ಪ್ಯಾಕೆಟ್‌ಗಳು ಮತ್ತು ಇತರ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.
ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಅಲ್ಲದೆ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಮತ್ತು ನೈಸರ್ಗಿಕ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವಂತೆ ಮನವಿ ಮಾಡಿದರು.
ಕಾಲೇಜಿನ ರೇಂಜರ್ ಲೀಡರ್‌ಗಳಾದ ದಿವ್ಯಶ್ರೀ ಜಿ ಹಾಗೂ ದೀಪಿಕಾ ಎಸ್ ಅವರ ನೇತೃತ್ವದಲ್ಲಿ ಈ ಅಭಿಯಾನವನ್ನು ನಡೆಸಲಾಯಿತು.