ವಿವೇಕಾನಂದ ಕಾಲೇಜು: ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ
Vivekananda College: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ 'ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ' ಈಚೆಗೆ ನಡೆಯಿತು.
ಪುತ್ತೂರು: 'ನಮ್ಮ ಸಂವಿಧಾನ ನಮಗೆ ನೀಡಿರುವ ಮಹತ್ವದ ಹಕ್ಕುಗಳಲ್ಲಿ ಮತದಾನದ ಹಕ್ಕು ಕೂಡ ಒಂದು' ಎಂದು ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮತದಾರರ ಸಾಕ್ಷರತಾ ಸಂಘ, ರೋವರ್ಸ್ & ರೇಂಜರ್ಸ್, ಎನ್‌ಸಿಸಿ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದೊಂದಿಗೆ, ಈಚೆಗೆ ಜರುಗಿದ 'ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ'ದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
'ನಾವು ಪ್ರತಿದಿನ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತೇವೆ. ಆದರೆ, ಸರ್ಕಾರದ ಹಣ ಎಲ್ಲಿ ಹಾಗೂ ಹೇಗೆ ಬಳಕೆಯಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಯಾವುದೇ ಒತ್ತಡಕ್ಕೆ ಒಳಗಾಗದೆ, ಅಭ್ಯರ್ಥಿಗಳ ಬಗ್ಗೆ ತಿಳಿದುಕೊಂಡು ತಮ್ಮ ಮತವನ್ನು ಚಲಾಯಿಸಬೇಕು' ಎಂದು ಹೇಳಿದರು.

'ಮತದಾನ ನಮ್ಮ ಹಕ್ಕು ಮಾತ್ರವಲ್ಲ, ನಮ್ಮ ಜವಾಬ್ದಾರಿಯೂ ಹೌದು. ನಮ್ಮ ಒಂದು ಮತವು ದೇಶದ ಆಡಳಿತದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಜಾಗೃತಿಯಿಂದ ಚಲಾಯಿಸಿ, ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು' ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತದಾನ ಮಾಡುವುದರೊಂದಿಗೆ, ಉತ್ತಮ ಹಾಗೂ ಭದ್ರವಾದ ಸರ್ಕಾರವನ್ನು ನಿರ್ಮಿಸುವಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವು ಮಹತ್ವದ್ದಾಗಿದೆ. ಯುವ ಮತದಾರರು ತಮ್ಮ ಮತದಾನದ ಹಕ್ಕಿನ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಸಭಾ ಕಾರ್ಯಕ್ರಮದ ಬಳಿಕ, ಮತದಾರರ ನೋಂದಣಿ ಕಾರ್ಯಕ್ರಮ ನಡೆಯಿತು.
ಮತದಾರರ ಸಾಕ್ಷರತಾ ಸಂಘದ ಸಂಯೋಜಕಿ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕಿ ದೀಪಿಕಾ ಎಸ್ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಪ್ರಮೋದ್ ಎಂ.ಜಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ವಂದಿಸಿದರು. ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿಯರಾದ ಧನ್ಯಶ್ರೀ ಮತ್ತು ಶಿವಾನಿ ಕಾರ್ಯಕ್ರಮ ನಿರೂಪಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.