ವಿವೇಕಾನಂದ ಪದವಿ ಕಾಲೇಜು: 'ಸ್ವಾದಸಂಭ್ರಮ-2026' ಆಹಾರ ಮೇಳ
Vivekananda Degree College: ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗ & ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ, 'ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮ ನಡೆಯಿತು.
ಪುತ್ತೂರು: 'ಆಹಾರ ಮೇಳ' ಎಂಬುದು ಕೇವಲ ಆಹಾರ ಮಾರಾಟ ಮಾತ್ರವಲ್ಲ.. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಹಾಗೂ ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ ಮಾಲೀಕ ಧ್ರುವ ಪ್ರಭು ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗ & ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ, ನಡೆದ 'ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು, ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು. ಈ ವೇಳೆ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು: ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದವು. ಫ್ರೋಜನ್ ಡಿಲೈಟ್ ತಂಡ ಪ್ರಥಮ ಹಾಗೂ ಬೈಟ್ ಬೈ ಬೈಟ್ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು.
ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಮತ್ತು ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಈ ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ.ಕೃತಿಕಾ ನಿರ್ವಹಿಸಿದರು.