ವಿವೇಕಾನಂದ ಪದವಿ ಕಾಲೇಜಿನಲ್ಲಿ ತುಡರ್ ಪರ್ಬ ಆಚರಣೆ
Vivekananda Degree College: ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ 'ತುಡರ್ ಪರ್ಬ' ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಕತ್ತಲೆಯನ್ನು ಹೋಗಲಾಡಿಸಲು ಬೆಳಕು ಅಗತ್ಯ. ಅದೇ ರೀತಿಯಲ್ಲಿ ಜ್ಞಾನದಿಂದ ಮನಸ್ಸಿನಲ್ಲಿರುವ ಅಜ್ಞಾನವನ್ನು ದೂರವಾಗಿಸಬಹುದು ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ಹೇಳಿದರು.
ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ಲಲಿತ ಕಲಾ ಸಂಘದ ಸಹಯೋಗದಲ್ಲಿ ದೀಪಾವಳಿ ಅಂಗವಾಗಿ ಏರ್ಪಡಿಸಿದ್ದ 'ತುಡರ್ ಪರ್ಬ' ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೀಪಾವಳಿ ಎಂದರೆ ಅಂಧಾಕಾರದಿಂದ ಬೆಳಕಿನತ್ತ ಸಾಗುವುದಾಗಿದ್ದು, ಪ್ರತಿಯೊಬ್ಬರ ಬದುಕಿನಲ್ಲೂ ಜ್ಞಾನವು ವಿಜೃಂಭಿಸಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ವಕೀಲ ಜಯರಾಮ ಎ, ಆಶಾ ಜಯರಾಮ, ಲಲಿತ ಕಲಾ ಸಂಘದ ಸಂಯೋಜಕಿ ಅನ್ನಪೂರ್ಣ ಮತ್ತು ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಾಮ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸರಿಗಮಪ ಟೈಟಲ್ ವಿನ್ನರ್ ಅಶ್ಮಿತ್ ಎ.ಜೆ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಪ್ರಥಮ ಬಿಎಸ್ಸಿ ವಿಭಾಗದ ವಿದ್ಯಾರ್ಥಿ ಸಂಪತ್ ಸ್ವಾಗತಿಸಿ, ವಂದಿಸಿದರು. ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಮಾ ಭಟ್ ನಿರೂಪಿಸಿದರು.