ವಿವೇಕಾನಂದ ಪಿಯು ಕಾಲೇಜು: ವಾಣಿಜ್ಯ ಸಂಘದ ಉದ್ಘಾಟನೆ
Vivekananda PU College: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ 'ವಾಣಿಜ್ಯ ಸಂಘ'ವನ್ನು ಉದ್ಘಾಟಿಸಲಾಯಿತು.
ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ 'ವಾಣಿಜ್ಯ ಸಂಘ'ವನ್ನು ಉದ್ಘಾಟಿಸಲಾಯಿತು.
ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್, ಈ ಸಂಘಕ್ಕೆ ಚಾಲನೆ ನೀಡಿದರು.
ಆ ಬಳಿಕ ಅವರು ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ, ಎಲ್ಲವು ಬದಲಾಗುತ್ತಿದೆ. ಭಾರತದಲ್ಲಿ 'ಸಿಎ' ವೃತ್ತಿಗೆ ಅಪಾರ ಬೇಡಿಕೆಯಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕು. ಯಶಸ್ಸು ಕೇವಲ ವೃತ್ತಿ ಜೀವನಕ್ಕೆ ಸೀಮಿತವಾಗಿಲ್ಲ. ಅದು ವ್ಯಕ್ತಿಯ ಜ್ಞಾನ, ಕೌಶಲ್ಯ, ನಡವಳಿಕೆ ಹಾಗೂ ಸಾಧನೆಯ ಸಮಗ್ರ ಪ್ರತಿಬಿಂಬವಾಗಿದೆ ಎಂದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ದೇವಿಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಪವನ್ ರಾಜೇಶ್, ಉಪಾಧ್ಯಕ್ಷ, ಶಮನ್ ಮತ್ತು ಕಾರ್ಯದರ್ಶಿ ಪಾರ್ಥ ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರ್ಥಿ ಪವನ್ ಸ್ವಾಗತಿಸಿದರು. ಶಮನ್ ವಂದಿಸಿದರು ಮತ್ತು ಸಾಹಿತ್ಯ ನಿರೂಪಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.