ವಿವೇಕಾನಂದ ಪಿಯು ಕಾಲೇಜು: ಇಕೋ & ಹೆಲ್ತ್ ಕ್ಲಬ್ ಉದ್ಘಾಟನೆ
Vivekananda PU College: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಜರುಗಿದ ಇಕೋ ಹಾಗೂ ಹೆಲ್ತ್ ಕ್ಲಬ್ ಉದ್ಘಾಟನೆ ಸಮಾರಂಭದಲ್ಲಿ ಪ್ರಾಂಶುಪಾಲ ದೇವಿಚರಣ್ ರೈ ಮಾತನಾಡಿದರು.
ಪುತ್ತೂರು: ಮನುಷ್ಯನ ಅಸ್ತಿತ್ವವು ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಅದನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಹೇಳಿದರು.
ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಜರುಗಿದ ಇಕೋ ಹಾಗೂ ಹೆಲ್ತ್ ಕ್ಲಬ್ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದು ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯನಾಶ, ಅತಿಯಾದ ಪ್ಲಾಸ್ಟಿಕ್ ಬಳಕೆ, ನೀರಿನ ದುರ್ಬಳಕೆ, ವಾಯುಮಾಲಿನ್ಯ, ಜಲಮಾಲಿನ್ಯ ಹಾಗೂ ಜೀವವೈವಿಧ್ಯದ ನಾಶ ಹೆಚ್ಚಾಗುತ್ತಿದೆ. ಇವು ಮಾನವ ಕುಲದ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಾಗಿವೆ ಎಂದರು.
ಈ ವೇಳೆ, ಗಿಡ ನೆಡುವ ಮೂಲಕ ಸಂಘದ ವಿವಿಧ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇಕೋ & ಹೆಲ್ತ್ ಕ್ಲಬ್‌ನ ಸಂಯೋಜಕ ಅನುಪಮಾ ಶೇಟ್ ಸ್ವಾಗತಿಸಿದರು. ವಿದ್ಯಾರ್ಥಿನಿ ಶಿಖಾ ವಂದಿಸಿದರು. ಸಮೀಕ್ಷಾ ಎನ್ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.