ವಿವೇಕಾನಂದ ಪಿಯು ಕಾಲೇಜು: ಬೀಳ್ಕೊಡುಗೆ ಸಮಾರಂಭ
Vivekananda PU College: ಪುತ್ತೂರಿನ ವಿವೇಕಾನಂದ ಪದವಿ-ಪೂರ್ವ ಕಾಲೇಜಿನಲ್ಲಿ ನಿವೃತ್ತರಾದ ಸತ್ಯನಾರಾಯಣ ಹಾಗೂ ಲೀಲಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಲಾಗಿತ್ತು.
ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ-ಪೂರ್ವ ಕಾಲೇಜಿನಲ್ಲಿ ನಿವೃತ್ತರಾದ ಸಹಾಯಕ ಸಿಬ್ಬಂದಿ ಸತ್ಯನಾರಾಯಣ ಹಾಗೂ ಲೀಲಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಲಾಗಿತ್ತು.
ಸತ್ಯನಾರಾಯಣ ಅವರು, ಸಂಸ್ಥೆಯಲ್ಲಿ 36 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಲೀಲಾವತಿ ಅವರು, 25 ವರ್ಷ ವಿವೇಕಾನಂದ ಪಾಲಿಟೆಕ್ನಿಕ್ ವಿಭಾಗ ಮತ್ತು 5 ವರ್ಷಗಳಿಂದ ಪಿಯು ಕಾಲೇಜಿನ ಭೌತಶಾಸ್ತ್ರ ಪ್ರಯೋಗಾಲಯದಲ್ಲಿ ಕೆಲಸ ಮಾಡಿದ್ದಾರೆ.

ಈ ವೇಳೆ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕಿ ವತ್ಸಲ ರಾಜ್ಞೆ ಮಾತನಾಡಿ, ಯಾವುದೇ ವೃತ್ತಿ ಮೇಲು ಅಥವಾ ಕೀಳು ಅಲ್ಲ. ನಿಷ್ಕಾಮ ಕರ್ಮದಿಂದ ಕಾರ್ಯವನ್ನು ಪೂರೈಸಿದಾಗ, ಭಗವಂತ ಅದಕ್ಕೆ ತಕ್ಕ ಪ್ರತಿಫಲವನ್ನು ನೀಡುತ್ತಾನೆ. ಪ್ರತಿಫಲವನ್ನು ಅಪೇಕ್ಷಿಸದ ಬದುಕು ಪ್ರೀತಿ ಹಾಗೂ ಗೌರವವನ್ನು ಪಡೆದುಕೊಳ್ಳುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ದೇವಿಚರಣ್ ರೈ ಎಂ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.