ವಿವೇಕಾನಂದ ಪದವಿಪೂರ್ವ ಕಾಲೇಜು: ಪ್ರಥಮ, ದ್ವಿತೀಯ ವಾಣಿಜ್ಯ & ಕಲಾ ವಿಭಾಗದ ಪೋಷಕರ ಸಭೆ
Vivekananda Pu College: ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಈಚೆಗೆ ಪ್ರಥಮ, ದ್ವಿತೀಯ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಪುತ್ತೂರು: ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಈಚೆಗೆ ಪ್ರಥಮ, ದ್ವಿತೀಯ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆಸಲ್ಪಡುತ್ತಿರುವ ಘಟಕ ಆಧಾರಿತ ಪರೀಕ್ಷೆಗಳು, ಆಂತರಿಕ ಮೌಲ್ಯಮಾಪನ, ನಿಯೋಜಿತ ಕಾರ್ಯಗಳು, ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ವಾಣಿಜ್ಯ ವಿಭಾಗದ ಉಪನ್ಯಾಸಕ ದೇವಿಪ್ರಸಾದ್ ಮತ್ತು ಶ್ರೀಧರ್ ಶೆಟ್ಟಿಗಾರ್ ಮಾಹಿತಿ ನೀಡಿದರು.

ಪೋಷಕರ ಸಭೆಯಲ್ಲಿ ಪ್ರಾಂಶುಪಾಲ ದೇವಿಚರಣ್ ರೈ ಎಂ ಉಪಸ್ಥಿತರಿದ್ದರು. ವಾಣಿಜ್ಯ, ಕಲಾ ಮತ್ತು ಭಾಷಾ ವಿಭಾಗದ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು & ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.