ವಿವೇಕಾನಂದ ಪಿಯು ಕಾಲೇಜು: ಸಾಹಿತ್ಯ ಸಂಘದ ವಿಧ ಚಟುವಟಿಕೆಗಳಿಗೆ ಚಾಲನೆ
Vivekananda PU College: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ, ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ, ಸಾಹಿತ್ಯ ಸಂಘದ ವಿವಿಧ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಮತ್ತು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಉದ್ಘಾಟಿಸಿ, ಮಾತನಾಡಿದರು.

'ಸಾಹಿತ್ಯವು ಮಾನವನ ಭಾವನೆ, ಆಲೋಚನೆ, ಅನುಭವ ಹಾಗೂ ಸಂಸ್ಕೃತಿಯನ್ನು ವ್ಯಕ್ತಪಡಿಸುವ ಶಕ್ತಿಯುತ ಮಾಧ್ಯಮವಾಗಿದೆ. ಅದು ನಮ್ಮ ಜೀವನವನ್ನು ಅರ್ಥ ಮಾಡಿಕೊಳ್ಳವುದಕ್ಕೆ ಸಾಧನವಾಗಿದೆ. ವಿದ್ಯಾರ್ಥಿಗಳಲ್ಲಿ ಭಾಷಾ ಜ್ಞಾನವನ್ನು ಬೆಳೆಸುವುದರ ಜೊತೆಗೆ, ಅವರ ಕಲ್ಪನಾಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ವಿಚಾರಶಕ್ತಿಯನ್ನು ಬೆಳೆಸುವಲ್ಲಿ ಸಾಹಿತ್ಯ ಸಂಘ ಮಹತ್ವದ ಪಾತ್ರ ವಹಿಸುತ್ತದೆ' ಎಂದು ಹೇಳಿದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ದಯಾಮಣಿ ಟಿ.ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ರತ್ನಾವತಿ ಬಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು, ಪ್ರಥಮ, ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು.
ವಿದ್ಯಾರ್ಥಿನಿ ಲಿಕ್ಷಿತಾ ಸ್ವಾಗತಿಸಿ, ದೃತಿ ವಂದಿಸಿದರು. ಮೇಘನಾ ಎಂ.ವಿ ಕಾರ್ಯಕ್ರಮವನ್ನು ನಿರೂಪಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.