ವಿವೇಕಾನಂದ ಪಿಯು ಕಾಲೇಜು: ವಿವೇಕ ಚಂದನ - ರಕ್ಷಾ ಬಂಧನ

Vivekananda PU College: ಪುತ್ತೂರಿನ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ವತಿಯಿಂದ, ಸಹೋದರತ್ವ ಸಾರುವ 'ರಕ್ಷಾ ಬಂಧನ' ಹಬ್ಬವನ್ನು 'ವಿವೇಕ ಚಂದನ - ರಕ್ಷಾ ಬಂಧನ' ಎಂಬ ಶೀರ್ಷಿಕೆಯಡಿ ವಿನೂತನ ರೀತಿಯಲ್ಲಿ ಆಚರಿಸಲಾಯಿತು.

Sep 7, 2026 - 14:46
ವಿವೇಕಾನಂದ ಪಿಯು ಕಾಲೇಜು: ವಿವೇಕ ಚಂದನ - ರಕ್ಷಾ ಬಂಧನ

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ-ಪೂರ್ವ ಕಾಲೇಜಿನ ವತಿಯಿಂದ, ಸಹೋದರತ್ವ ಸಾರುವ 'ರಕ್ಷಾ ಬಂಧನ' ಹಬ್ಬವನ್ನು 'ವಿವೇಕ ಚಂದನ - ರಕ್ಷಾ ಬಂಧನ' ಎಂಬ ಶೀರ್ಷಿಕೆಯಡಿ ವಿನೂತನ ರೀತಿಯಲ್ಲಿ ಆಚರಿಸಲಾಯಿತು.

ಪ್ರಾಂಶುಪಾಲರ ಮಾರ್ಗದರ್ಶನದಲ್ಲಿ, ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ಆರಕ್ಷಕ ಠಾಣೆ, ಪತ್ರಿಕಾ ಕಛೇರಿ, ಆಸ್ಪತ್ರೆ, ನಾನಾ ಸಂಘ ಸಂಸ್ಥೆಗಳು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ರಕ್ಷೆಯನ್ನು ಕಟ್ಟಿ 'ರಕ್ಷಾ ಬಂಧನ' ಸಂದೇಶ ನೀಡಿ, ಸಿಹಿ ವಿತರಿಸಿ ಸಂಭ್ರಮಿಸಿದರು.

ತಮ್ಮ ಶಾಲೆಗಳಿಗೂ ಭೇಟಿ ನೀಡಿದ ವಿದ್ಯಾರ್ಥಿಗಳು: ಕಾಲೇಜಿನ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿದ ಶಾಲೆಗಳಿಗೂ ಭೇಟಿ ನೀಡಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರಿಗೆ ರಕ್ಷೆ ಕಟ್ಟಿ, ಆಶೀರ್ವಾದ ಪಡೆದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.