ವಿವೇಕಾನಂದ ಪಿಯು ಕಾಲೇಜು: ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Vivekananda PU College: ವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತ ಮಂಡಳಿ ಸಮ್ಮುಖದಲ್ಲಿ ನಡೆಯಿತು.

Sep 7, 2026 - 20:16
Sep 7, 2026 - 20:17
ವಿವೇಕಾನಂದ ಪಿಯು ಕಾಲೇಜು: ಶಿಕ್ಷಕ-ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತ ಮಂಡಳಿ ಸಮ್ಮುಖದಲ್ಲಿ ನಡೆಯಿತು. 

ಪ್ರಸ್ತುತ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಸುಬೋಧ್ ಶೆಟ್ಟಿ ಎಂ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಶಿಕಲಾ ಎಂ.ಕೆ ಮತ್ತು ಸತ್ಯನಾರಾಯಣ ಅವರನ್ನು ನೇಮಿಸಲಾಗಿದೆ.

ಕಾರ್ಯದರ್ಶಿಯಾಗಿ ಉದಯರವಿ ಕೆ ಮತ್ತು ದಿವ್ಯಾ ಡಿ ರಾವ್ ಆಯ್ಕೆಯಾಗಿದ್ದಾರೆ. ಪದನಿಮಿತ್ತ ಕಾರ್ಯದರ್ಶಿಗಳಾಗಿ ಪ್ರಾಂಶುಪಾಲ ದೇವಿಚರಣ್ ರೈ ಎಂ ನೇಮಕಗೊಂಡಿದ್ದಾರೆ.

ಈ ಸಭೆಯಲ್ಲಿ, ಹಿಂದಿನ ವರ್ಷದ ಆಯವ್ಯಯ ಹಾಗೂ 2026-27ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಕಾಲೇಜು ಆಡಳಿತಮಂಡಳಿ ನಿರ್ದೇಶಕ ಡಾ.ಮುರಳಿಕೃಷ್ಣ ರೈ ಕೆ. ಇವರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. 

ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಶೈಕ್ಷಣಿಕ ಸಂಯೋಜಕ ಶ್ರೀವತ್ಸ ಎನ್ ನಿರೂಪಿಸಿ, ವಂದಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.