Vivo T5 5G: ವಿವೋ ಟಿ5 5ಜಿ ಸ್ಮಾರ್ಟ್‌ಫೋನ್ ಬಿಡುಗಡೆ.. ಬೆಲೆ ಎಷ್ಟು?

Vivo T5 5G: ನೂತನ ವಿವೋ ಟಿ5 5ಜಿ (Vivo T5 5G) ಸ್ಮಾರ್ಟ್‌ಫೋನ್, ಬುಧವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

Sep 3, 2026 - 21:15
Vivo T5 5G: ವಿವೋ ಟಿ5 5ಜಿ ಸ್ಮಾರ್ಟ್‌ಫೋನ್ ಬಿಡುಗಡೆ.. ಬೆಲೆ ಎಷ್ಟು?

ನೂತನ ವಿವೋ ಟಿ5 5ಜಿ (Vivo T5 5G) ಸ್ಮಾರ್ಟ್‌ಫೋನ್, ಬುಧವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದರ ಮಾರಾಟವು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಫ್ಲಿಪ್‌ಕಾರ್ಟ್, ವಿವೋ ಇಂಡಿಯಾ ಇ-ಸ್ಟೋರ್ ಹಾಗೂ ಎಲ್ಲ ಚಿಲ್ಲರೆ ಮಳಿಗೆಗಳ ಮೂಲಕ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಇದು 6GB + 128GB, 8GB + 128GB, 8GB + 256GB ಮತ್ತು 12GB + 256GB ಇಂಟರ್ನಲ್ ಸ್ಟೋರೇಜ್‌ನ್ನು ಪಡೆದಿದೆ. ರೂ.34,999, ರೂ.39,999 ರೂ.44,999 ಹಾಗೂ ರೂ.49,999 ದರವನ್ನು ಹೊಂದಿದೆ. 
 
ದೊಡ್ಡದಾದ 7050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. 44W ಫ್ಲ್ಯಾಶ್‌ ಚಾರ್ಜ್‌ನ್ನು ಬೆಂಬಲಿಸುತ್ತದೆ. ಬರೀ 30 ನಿಮಿಷ ಚಾರ್ಜಿಂಗ್‌ಗೆ ಇಟ್ಟರೆ, ಬ್ಯಾಟರಿಯು ಶೇಕಡ 1% ರಿಂದ 44% ಚಾರ್ಜ್ ಆಗುತ್ತದೆ. 
 
ಈ ಫೋನ್ 6.83-ಇಂಚಿನ 1.5K 3D ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಪಡೆದಿದೆ. ಗೇಮಿಂಗ್ ಹಾಗೂ ಸ್ಟ್ರೀಮಿಂಗ್ ಸೇರಿದಂತೆ ದೈನಂದಿನ ಬಳಕೆಗೆ ಅತ್ಯುತ್ತಮವಾದ ಆಯ್ಕೆಯಾಗಿದೆ. 

ಇದು 50MP ಸೋನಿ IMX882 ಮೇನ್ ಕ್ಯಾಮೆರಾವನ್ನು ಒಳಗೊಂಡಿದ್ದು, ಉತ್ತಮವಾದ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಣ ಮಾಡಬಹುದು. ಮೀಡಿಯಾ ಟೆಕ್ ಡೈಮೆನ್ಸಿಟಿ 7500 ಟರ್ಬೊ ಪ್ರೊಸೆಸರ್‌ನ್ನು ಹೊಂದಿದೆ. ಕಾಸ್ಮಿಕ್ ಬ್ಲ್ಯಾಕ್ ಮತ್ತು ಗ್ಲೇಸಿಯರ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.