Vivo T5 Lite: ಜುಲೈ 16ಕ್ಕೆ ಹೊಸ ವಿವೋ ಟಿ5 ಲೈಟ್ 5ಜಿ ಬಿಡುಗಡೆ

Vivo T5 Lite 5G Phone Launch On July 16: ವಿವೋ ಟಿ5 ಲೈಟ್ 5ಜಿ ಫೋನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Jul 11, 2026 - 14:05
Vivo T5 Lite: ಜುಲೈ 16ಕ್ಕೆ ಹೊಸ ವಿವೋ ಟಿ5 ಲೈಟ್ 5ಜಿ ಬಿಡುಗಡೆ

ಬೆಂಗಳೂರು: ನೀವು ಬಜೆಟ್ ಬೆಲೆಯಲ್ಲಿ ಹೊಚ್ಚ ಹೊಸ ಸ್ಮಾರ್ಟ್‌ಫೋನ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ವಿವೋ ಟಿ5 ಲೈಟ್ 5ಜಿ (Vivo T5 Lite 5G) ಫೋನ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಜುಲೈ 16 ರಂದು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ.
 
ಇದು ರೂ.15,000 ರಿಂದ ರೂ.17,999 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ದೊಡ್ಡ ಗಾತ್ರದ 6,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 44W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಬಲ್ಲದು ಎಂದು ಹೇಳಲಾಗಿದೆ.
 
6.74-ಇಂಚಿನ HD+ ಎಲ್‌ಸಿಡಿ ಸ್ಕ್ರೀನ್ ಒಳಗೊಂಡಿರಲಿದ್ದು, 120Hz ರಿಫ್ರೆಶ್ ರೇಟ್ & 1200nits ಬ್ರೈಟ್‌ನೆಸ್‌ನ್ನು ಪಡೆದಿರಲಿದೆ. ಡ್ಯುಯಲ್ ಕ್ಯಾಮೆರಾ ಸೆಟಪ್ ಹಾಗೂ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನ್ನು ಹೊಂದಿರುವ ಸಾಧ್ಯತೆಯಿದೆ. 
 
ಫ್ಲಾಟ್ ಎಡ್ಜ್‌ಗಳು ಹಾಗೂ ವರ್ಟಿಕಲ್ ಕ್ಯಾಮೆರಾ ಸೆಟಪ್ ಒಳಗೊಂಡಿರಲಿದೆ. ಡಾರ್ಕ್ ಬ್ಲೂ ಮತ್ತು ಲೈಟ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.