ವಾಲಿಬಾಲ್ ಪಂದ್ಯಾವಳಿ: ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
Volleyball Tournament: ವಿದ್ಯಾ ಭಾರತಿ ವಿಜ್ಞಾನ ಕೇಂದ್ರದ ವತಿಯಿಂದ, ಈಚೆಗೆ ಹೈದರಾಬಾದ್‌ನಲ್ಲಿ ನಡೆದ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡಿದ್ದಾರೆ.
ಪುತ್ತೂರು: (ಬಡಗನ್ನೂರು): ವಿದ್ಯಾ ಭಾರತಿ ವಿಜ್ಞಾನ ಕೇಂದ್ರದ ವತಿಯಿಂದ, ಈಚೆಗೆ ಹೈದರಾಬಾದ್‌ನಲ್ಲಿ ನಡೆದ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮಾಡಿದ್ದಾರೆ.
14 ವರ್ಷ ವಯೋಮಾನದ ಪಂದ್ಯಾವಳಿಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಾದ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ ಕೆ.ಎ ಹಾಗೂ ಸೃಜನ್ ಅವರು ಪ್ರಥಮ ಸ್ಥಾನ ಪಡೆದಿದ್ದು, ಗ್ವಾಲಿಯರ್‌ನಲ್ಲಿ ಜರುಗುವ ರಾಷ್ಟ್ರಮಟ್ಟದ ಪಂದ್ಯಾವಳಿಗೂ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಹಾಗೆಯೇ 17 ವರ್ಷ ವಯೋಮಾನದಲ್ಲಿ 10ನೇ ತರಗತಿಯ ಸಾಥ್ವಿ ಕೂಡ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿಗಳ ಸಾಧನೆಗೆ ಪಟ್ಟೆ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು, ಸರ್ವ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.