VTU: 26ನೇ ವಾರ್ಷಿಕ ಘಟಿಕೋತ್ಸವ & ಪದವಿ ಪ್ರದಾನ ಸಮಾರಂಭ
VTU: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನ ಸಂಗಮ ಕ್ಯಾಂಪಸ್‌ನಲ್ಲಿ ಇಂದು '26ನೇ ವಾರ್ಷಿಕ ಘಟಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭ'ವನ್ನು ಏರ್ಪಡಿಸಲಾಗಿತ್ತು.
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಜ್ಞಾನ ಸಂಗಮ ಕ್ಯಾಂಪಸ್‌ನಲ್ಲಿ ಇಂದು '26ನೇ ವಾರ್ಷಿಕ ಘಟಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭ'ವನ್ನು ಏರ್ಪಡಿಸಲಾಗಿತ್ತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಭಾಗವಹಿಸಿದರು.
ಸಿಎಂಆರ್ ಜ್ಞಾನಧಾರ ಟ್ರಸ್ಟ್‌ನ ಅಧ್ಯಕ್ಷ ಡಾ.ಸಬಿತಾ ರಾಮಮೂರ್ತಿ, ಆರ್‌ವಿ ಶಿಕ್ಷಣ ಸಮಿತಿ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಪಿ.ಶ್ಯಾಮ್, ಎಐಸಿಟಿಇ ಮಾಜಿ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಂ ಅವರಿಗೆ ಗೌರವ ಡಾಕ್ಟರೇಟ್ ನೀಡಿ, ಅಭಿನಂದಿಸಲಾಯಿತು.

ಈ ವೇಳೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಕುಲಸಚಿವ ಪ್ರೊ. ಪ್ರಸಾದ ಬಿ.ರಾಂಪುರೆ ಮತ್ತು ಪ್ರೊ.ಯು.ಜೆ.ಉಜ್ವಲ್ ಉಪಸ್ಥಿತರಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.