IND vs AUS: ಬಾರ್ಡರ್-ಗವಾಸ್ಕರ್ ಟ್ರೋಫಿ ಯಾವಾಗ ನಡೆಯುತ್ತೆ?
Border-Gavaskar Trophy: ಭಾರತ - ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಟೆಸ್ಟ್ ಸರಣಿ 'ಬಾರ್ಡರ್-ಗವಾಸ್ಕರ್ ಟ್ರೋಫಿ'ಗೆ ವೇದಿಕೆ ಸಿದ್ದಗೊಳ್ಳುತ್ತಿದ್ದು, 2027ರ ಜನವರಿ 21 ರಿಂದ ಮಾರ್ಚ್ 3 ರವರೆಗೆ ಈ ಟೂರ್ನಿ ಜರುಗಲಿದೆ.
ಭಾರತ - ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಟೆಸ್ಟ್ ಸರಣಿ 'ಬಾರ್ಡರ್-ಗವಾಸ್ಕರ್ ಟ್ರೋಫಿ'ಗೆ ವೇದಿಕೆ ಸಿದ್ದಗೊಳ್ಳುತ್ತಿದ್ದು, 2027ರ ಜನವರಿ 21 ರಿಂದ ಮಾರ್ಚ್ 3 ರವರೆಗೆ ಈ ಟೂರ್ನಿ ಜರುಗಲಿದೆ.
ಭಾರತವು ಆತಿಥ್ಯ ವಹಿಸಲಿದ್ದು, ದೇಶದ ವಿವಿಧ ಭಾಗಗಳಲ್ಲಿ 5 ಪಂದ್ಯಗಳು ನಡೆಯಲಿವೆ.
ಮೊದಲ ಟೆಸ್ಟ್ ಜನವರಿ 21 ರಿಂದ 25 ರವರೆಗೆ ನಾಗಪುರದ ವಿಸಿಎ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದೆ. ಎರಡನೇ ಟೆಸ್ಟ್ ಜನವರಿ 29 ರಿಂದ ಫೆಬ್ರವರಿ 2ರ ನಡುವೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ. ಮೂರನೇ ಟೆಸ್ಟ್ ಫೆಬ್ರವರಿ 11 ರಿಂದ 15 ರವರೆಗೆ ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ನಾಲ್ಕನೇ ಟೆಸ್ಟ್ ಫೆಬ್ರವರಿ 19 ರಿಂದ 23 ರವರೆಗೆ ರಾಂಚಿಯ ಜೆಎಸ್‌ಸಿಎ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಐದನೇ ಟೆಸ್ಟ್ ಫೆಬ್ರವರಿ 27 ರಿಂದ ಮಾರ್ಚ್ 3ರ ಮಧ್ಯೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈವರೆಗೆ 17 'ಬಾರ್ಡರ್-ಗವಾಸ್ಕರ್' ಟೆಸ್ಟ್ ಸರಣಿ ನಡೆದಿದ್ದು, 10 ಬಾರಿ ಭಾರತ ಹಾಗೂ 6 ಬಾರಿ ಆಸ್ಟ್ರೇಲಿಯಾ ಜಯಿಸಿದೆ. 1 ಬಾರಿ 'ಟೈ' ಆಗಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.