ಪುತ್ತೂರು: ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ

ST Philomena School: ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಪಟ್ಲ ಫೌಂಡೇಶನ್ ಅವರ ವತಿಯಿಂದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ತರಗತಿಗಳನ್ನು  ಉದ್ಘಾಟಿಸಲಾಯಿತು.

Jul 17, 2026 - 23:47
Jul 18, 2026 - 08:24
ಪುತ್ತೂರು: ಸಂತ ಫಿಲೋಮಿನಾ  ಪ್ರೌಢಶಾಲೆಯಲ್ಲಿ ಯಕ್ಷಗಾನ  ತರಗತಿ ಉದ್ಘಾಟನೆ

ಪುತ್ತೂರು: ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಪಟ್ಲ ಫೌಂಡೇಶನ್ ಅವರ ವತಿಯಿಂದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ತರಗತಿಗಳನ್ನು  ಉದ್ಘಾಟಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕ ವಂ. ಮ್ಯಾಕ್ಸಿಮ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ನಮ್ಮ ಶಾಲೆಯಲ್ಲಿ ಪ್ರಥಮವಾಗಿ ಈ ತರಗತಿಗಳು ನಡೆಯುತ್ತಿದೆ. ಮಕ್ಕಳ ಮನೋಸ್ಥೈರ್ಯ ತುಂಬಲು ಸಹಕಾರಿಯಾಗಲಿದ್ದು, ವಿದ್ಯಾರ್ಥಿಗಳಲ್ಲಿ ಇರುವಂತಹ ಪ್ರತಿಭೆಗಳನ್ನು ಅನಾವರಣಗೊಳಿಸಲು ಇದೊಂದು ವೇದಿಕೆ ಆಗಲಿದೆ. ನಾಡಿನ ಕಲೆಯನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಸಲು ಇದೊಂದು ಉತ್ತಮ ಅವಕಾಶ ಎಂದು ತಿಳಿಸಿದರು.

ಪಟ್ಲಾ ಫೌಂಡೇಶನ್ ಸಂಚಾಲಕ ವಾಸುದೇವ ಐತಾಳ್ ಪಣಂಬೂರು ಮೌಖಿಕವಾಗಿ ಉದ್ಘಾಟಿಸಿ, ಈ ಒಂದು ಪ್ರತಿಷ್ಠ ಸಂಸ್ಥೆಯಿಂದ  ತರಬೇತಿಗೆ ಅವಕಾಶ ಸಿಕ್ಕಿದ್ದು ನಮಗೆ ತುಂಬಾ ಸಂತೋಷ ನೀಡಿದೆ ಎಂದು ಹೇಳಿ, ವಿದ್ಯಾರ್ಥಿಗಳು ನಾಡಿನ ಉತ್ತಮ ಪ್ರಜೆಯಾಗಲು ಇದು ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಯಕ್ಷ ಗುರು ಯೋಗೀಶ್  ಶರ್ಮ ಅಳದಂಗಡಿ ಯಕ್ಷಗಾನ ತರಬೇತಿಯನ್ನು ನೆರವೇರಿಸಿದರು. ಶಾಲಾ ಶಿಕ್ಷಕಿ ಆಶಾ ರೆಬೆಲ್ಲೋ ಅವರು ಸ್ವಾಗತಿಸಿದರು. ಸಂತ ಫಿಲೋಮಿನಾ ಕಾಲೇಜು ಉಪನ್ಯಾಸಕರು ಹಾಗೂ ಪುತ್ತೂರು ಸುಳ್ಯ ಪಟ್ಲ ಘಟಕದ ಸಂಚಾಲಕ ಪ್ರಶಾಂತ್ ರೈ ಕಾರ್ಯಕ್ರಮವನ್ನು ನಿರೂಪಿಸಿ, ವಂದನಾರ್ಪಣೆ  ನೆರವೇರಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.