Ramayana: ನಾಳೆ ವಿಶ್ವದಾದ್ಯಂತ ರಾಮಾಯಣ ಸಿನಿಮಾ ಬಿಡುಗಡೆ.. ಲಂಕೇಶ್ವರ ರಾವಣನಾಗಿ ಯಶ್ ಅಬ್ಬರ!

Ramayana: ರಾಕಿಂಗ್ ಸ್ಟಾರ್ ಯಶ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ರಾಮಾಯಣ' ನಾಳೆ (ನ.5) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

Nov 4, 2026 - 13:42
Ramayana: ನಾಳೆ ವಿಶ್ವದಾದ್ಯಂತ ರಾಮಾಯಣ ಸಿನಿಮಾ ಬಿಡುಗಡೆ.. ಲಂಕೇಶ್ವರ ರಾವಣನಾಗಿ ಯಶ್ ಅಬ್ಬರ!

Ramayana: ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ರಾಮಾಯಣ' ನಾಳೆ (ನ.5) ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಲಂಕೇಶ್ವರ ರಾವಣನಾಗಿ ಯಶ್ ಅಬ್ಬರಿಸಿದ್ದಾರೆ. ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಲಕ್ಷ್ಮಣನಾಗಿ ರವಿ ದುಬೆ ಹಾಗೂ ಹನುಮಂತನಾಗಿ ಸನ್ನಿ ಡಿಯೋ ಬಣ್ಣ ಹಚ್ಚಿದ್ದಾರೆ.

ಇತ್ತೀಚಿನ ಸ್ಯಾಕ್ನಿಲ್ಕ್ ವರದಿಯ ಪ್ರಕಾರ, ಈ ಚಿತ್ರವು ಭಾರತದಾದ್ಯಂತ ಮುಂಗಡ ಟಿಕೆಟ್ ಮಾರಾಟದಿಂದಲೇ ರೂ.96.64 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಸುಮಾರು 25.68 ಲಕ್ಷ ಟಿಕೆಟ್‌ಗಳನ್ನು ಮಾರಾಟಗೊಂಡಿವೆ.

ನಿತೇಶ್ ತಿವಾರಿ ಆಕ್ಷನ್ ಕಟ್ ಹೇಳಿದ್ದಾರೆ. 'ಪ್ರೈಮ್ ಫೋಕಸ್ ಸ್ಟುಡಿಯೋಸ್' ಮಾಲೀಕ ನಮಿತ್ ಮಲ್ಹೋತ್ರಾ ಜೊತೆಗೂಡಿ ತಮ್ಮದೇ ಸ್ವಂತ ಬ್ಯಾನರ್ 'ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್'ನಡಿ ಯಶ್, ಈ ಬಿಗ್-ಬಜೆಟ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಹ್ಯಾನ್ಸ್ ಜಿಮ್ಮರ್ ಹಾಗೂ ಎ.ಆರ್.ರೆಹಮಾನ್ ಸಂಗೀತ ನೀಡಿದ್ದಾರೆ.

ಈಚೆಗೆ ಲಾಸ್ ಏಂಜಲಿಸ್‌ನಲ್ಲಿ ಈ ಚಿತ್ರದ ಪ್ರೀಮಿಯರ್ ಶೋ ಏರ್ಪಡಿಸಲಾಗಿತ್ತು. ಯಶ್ ಪತ್ನಿ ರಾಧಿಕಾ ಪಂಡಿತ್ & ಮಕ್ಕಳಾದ ಐರಾ ಮತ್ತು ಯಥರ್ವ್ ಈ ಶೋ ವೀಕ್ಷಿಸಿದ್ದರು. ರಾವಣ ಜಟಾಯುವನ್ನು ಕೊಲ್ಲುವ ದೃಶ್ಯವನ್ನು ನೋಡಿ, ಯಶ್ ಪುತ್ರ ಯಥರ್ವ್ ಅತ್ತಿದ್ದರು. ಈ ಕುರಿತು ನಟಿ ಸಾಯಿ ಪಲ್ಲವಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.