ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ

ಆಯುಷ್ ಬದೋನಿ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಈವರೆಗೆ 27 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಇನಿಂಗ್ಸ್ ಆಡಿರುವ ಅವರು 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 693 ರನ್ ಕಲೆಹಾಕಿದ್ದಾರೆ.

Jan 12, 2026 - 15:17
ಟೀಮ್ ಇಂಡಿಯಾಗೆ ಯುವ ಆಟಗಾರ ಎಂಟ್ರಿ

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇದೀಗ ಯುವ ಆಲ್​ರೌಂಡರ್ ಆಯುಷ್ ಬದೋನಿ ಅವರನ್ನು ಆಯ್ಕೆ ಮಾಡಲಾಗಿದೆ. ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಟೀಮ್ ಇಂಡಿಯಾ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಹೊರಬಿದ್ದಿದ್ದಾರೆ. ಅವರ ಬದಲಿಗೆ ಇದೀಗ ಯುವ ಆಲ್​ರೌಂಡರ್ ಆಯುಷ್ ಬದೋನಿ ಅವರನ್ನು ಆಯ್ಕೆ ಮಾಡಲಾಗಿದೆ.
ಅಲ್ಲದೆ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಬಲಗೈ ಆಲ್​ರೌಂಡರ್ ಆಯುಷ್ ಬದೋನಿ  ಆಯ್ಕೆಯಾಗಿದ್ದಾರೆ. ದೆಹಲಿ ಮೂಲದ ಬದೋನಿ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡದಿದ್ದಾರೆ. ಅದರಂತೆ ರಾಜ್​ಕೋಟ್ ಹಾಗೂ ಇಂದೋರ್​ನಲ್ಲಿ ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧ 2 ಪಂದ್ಯಗಳ ವೇಳೆ ಆಯುಷ್ ಬದೋನಿ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಳ್ಳಲಿದ್ದಾರೆ.

ಆಯುಷ್ ಬದೋನಿ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಈವರೆಗೆ 27 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 22 ಇನಿಂಗ್ಸ್ ಆಡಿರುವ ಅವರು 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 693 ರನ್ ಕಲೆಹಾಕಿದ್ದಾರೆ. ಹಾಗೆಯೇ 18 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಇನ್ನು ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 56 ಪಂದ್ಯಗಳನ್ನಾಡಿರುವ ಅವರು ಒಟ್ಟು 6 ಅರ್ಧಶತಕಗಳೊಂದಿಗೆ 963 ರನ್​ಗಳಿಸಿದ್ದಾರೆ. ಇದೀಗ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆಯುಷ್ ಬದೋನಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.