"ಆಪರೇಷನ್ ಸಿಂಧೂರ್' ನಮ್ಮ ಸೇನೆ ನಮ್ಮ ಹೆಮ್ಮೆ - ಜಮೀರ್ ಅಹಮದ್ ಖಾನ್

ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನ ಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನ ಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆ ಯಾಗಿದೆ.

May 7, 2025 - 14:30
May 7, 2025 - 14:39
"ಆಪರೇಷನ್ ಸಿಂಧೂರ್' ನಮ್ಮ ಸೇನೆ ನಮ್ಮ ಹೆಮ್ಮೆ - ಜಮೀರ್ ಅಹಮದ್ ಖಾನ್
ಜಮೀರ್ ಅಹಮದ್ ಖಾನ್


ಬೆಂಗಳೂರು:  ಪೆಹಲ್ಗಮ್   ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ  'ಆಪರೇಷನ್ ಸಿಂಧೂರ್ ' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನ ಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನ ಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆ ಯಾಗಿದೆ. 'ನಮ್ಮ ಸೇನೆ ನಮ್ಮ ಹೆಮ್ಮೆ' ಎಂದು ಹೇಳಿದ್ದಾರೆ.
ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಭಯೋತ್ಪಾದಕ ಕೃತ್ಯ ಎಸಗುವ ಉಗ್ರಗಾಮಿ ಸಂಘಟನೆಗಳ ಹುಟ್ಟಡಗಿಸುವ  ಹೋರಾಟದಲ್ಲಿ ನಾವೆಲ್ಲರೂ ಕೇಂದ್ರ ಸರ್ಕಾರದ ಜತೆ ಇದ್ದೇವೆ ಎಂದು ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.