ಈ ದಿನದ ರಾಶಿ ಭವಿಷ್ಯ
10-06-2025

ಅದೃಷ್ಟ ಸಂಖ್ಯೆ 1
ಜ್ಯೋತಿರ್ಮಯ
೧.ಮೇಷ:
ಶನಿಯ ಮಹಿಮೆ ಜೋರಾಗಿದ್ದರೂ ಬಹುಪಾಲು, ನೆಮ್ಮದಿ. ಉದ್ಯೋಗದಲ್ಲಿ ಅಪೂರ್ವ ಸಾಧನೆ ಮಾಡಿದ ಹೆಗ್ಗಳಿಕೆ. ಉದ್ಯಮದಲ್ಲಿ ಹೆಚ್ಚಿನ ಸಮಸ್ಯೆಗಳು ನಿವಾರಣೆ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆರೋಗ್ಯ, ಉತ್ಸಾಹ. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
೨. ವೃಷಭ:
ಸರಿಯಾಗಿ ವಿಮರ್ಶಿಸಿ ಕ್ರಮ ತೆಗೆದುಕೊಳ್ಳಿ. ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸಿಯೇ ಇನ್ನೊಂದಕ್ಕೆ ಕೈಹಾಕಿ. ವಿತ್ತಸಂಸ್ಥೆಯಿಂದ ಧನಸಹಾಯ ಸಕಾಲಕ್ಕೆ ಲಭ್ಯ. ಸಂಸಾರದಲ್ಲಿ ಎಲ್ಲರಿಗೂ ಸಮಾಧಾನದ ಅನುಭವ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಗಣಪತಿ ಅಥರ್ವಶೀರ್ಷ, ಶಿವಕವಚ, ಗುರುಸ್ತೋತ್ರ ಓದಿ.
೩. ಮಿಥುನ:
ಉದ್ಯೋಗದಲ್ಲಿ ಸಾಮಾನ್ಯ ಸಂತೃಪ್ತಿ. ಸೇವಾ ಹಿರಿತನಕ್ಕೆ ಮಾನ್ಯತೆ. ಸ್ವಂತ ಉದ್ಯಮ ಆರ್ಥಿಕ ಮುಗ್ಗಟ್ಟು ಪರಿಹಾರ ಸನ್ನಿಹಿತ. ಮಹಿಳೆಯರ ಸ್ವಾವಲಂಬನೆ ಸಾಧನೆ ಪ್ರಗತಿಯಲ್ಲಿ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ. ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೪.ಕರ್ಕಾಟಕ:
ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಉದ್ಯೋಗ ಅರಸುತ್ತಿರುವವರ ಪ್ರಯತ್ನ ಸಫಲ. ಹಿರಿಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ. ಸಂಕಷ್ಟನಾಶನ ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೫. ಸಿಂಹ:
ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಪರದೇಶದಲ್ಲಿರುವ ಬಂಧುಗಳಿಂದ ಶುಭವಾರ್ತೆ. ಖಾದಿಯ ಸಿದ್ಧ ಉಡುಪು ವ್ಯಾಪಾರಿಗಳಿಗೆ ಅನುಕೂಲ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೬.ಕನ್ಯಾ:
ಆಯಕಟ್ಟಿನ ಸ್ಥಾನದಲ್ಲಿ ಕರ್ತವ್ಯ. ವಿದ್ಯುತ್ ಮತ್ತು ಇಲೆಕ್ಟ್ರಾನಿಕ್ಸ್ ಉಪಕರಣ ವ್ಯಾಪಾರಿಗಳಿಗೆ ಉತ್ತಮ ಆದಾಯ. ವಿವಾಹಾಸಕ್ತರಿಗೆ ಒಳ್ಳೆಯ ಸಂಬಂಧ ಕೂಡಿ ಬರುವ ಸಾಧ್ಯತೆ. ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ. ದೇವತಾ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ. ಗಣೇಶ ಕವಚ, ವಿಶ್ವನಾಥಾಷ್ಟಕ, ನವಗ್ರಹ ಮಂಗಲಾಷ್ಟಕ ಓದಿ.
೭. ತುಲಾ:
ಭವಿಷ್ಯದ ಕುರಿತು ಚಿಂತೆ ಬೇಡ. ಉದ್ಯೋಗ, ವ್ಯವಹಾರದಲ್ಲಿ ಒಳ್ಳೆಯ ಹೆಸರು. ನೌಕರ ವರ್ಗದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೮. ವೃಶ್ಚಿಕ:
ಉದ್ಯೋಗದಲ್ಲಿ ಕ್ರಮಾಗತ ಪ್ರಗತಿ. ಸಣ್ಣ ಪ್ರಮಾಣದ ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ. ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ದೇವಾಲಯಕ್ಕೆ ಭೇಟಿ. ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉಲ್ಲಾಸದ ವಾತಾವರಣ. ಗಣೇಶ ದ್ವಾದಶನಾಮ ಸ್ತೋತ್ರ, ವೆಂಕಟೇಶ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
೯.ಧನು:
ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. ಹಿತಶತ್ರುಗಳ ಕಾಟದಿಂದ ಬಿಡುಗಡೆ. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ. ಕೃಷಿ ಕ್ಷೇತ್ರಕ್ಕೆ ಹೊಸ ನೀರಿನ ಆಸರೆ ಲಭ್ಯ. ಗಣಪತಿ ಅಥರ್ವಶೀರ್ಷ, ವೇದಸಾರ ಶಿವಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
೧೦.ಮಕರ:
ಸಮಸ್ಯೆಗಳಿಗೆ ತಾತ್ಕಾಲಿಕ ವಿರಾಮ. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧.ಕುಂಭ:
ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ. ಗಣೇಶ ಕವಚ, ನರಸಿಂಹ ಕವಚ, ಶನಿಮಹಾತ್ಮೆ ಓದಿ.
೧೨. ಮೀನ:
ಶನಿಮಹಾತ್ಮನ ಅನುಗ್ರಹದಿಂದ ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಮಾತೃವರ್ಗದ ಸದಾಶಯದಿಂದ ಕಾರ್ಯಗಳಲ್ಲಿ ಜಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.