ಒಂದು ವಾರದೊಳಗೆ ಗೃಹಲಕ್ಷ್ಮಿ ಅದಾಲತ್ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

Nov 23, 2023 - 14:11
ಒಂದು ವಾರದೊಳಗೆ ಗೃಹಲಕ್ಷ್ಮಿ ಅದಾಲತ್ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

 ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. 

ಬಾಲ ಭವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಸಮಾರಂಭದ ಬಳಿಕ ಮಾತನಾಡಿದ ಸಚಿವರು, ಈಗಾಗಲೇ  1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಿಡಿಓ , ಅಂಗನವಾಡಿ ಕಾರ್ಯಕರ್ತೆಯರ ಮೂಲಕ  ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು.

ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು,  ಅರ್ಜಿಗಳನ್ನು  ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.