ದಿನ ಭವಿಷ್ಯ

19-06-2025

Jun 19, 2025 - 03:00
ದಿನ ಭವಿಷ್ಯ


               ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ 1

೧.ಮೇಷ:

ದೇಹ, ಮನಸ್ಸು ಎರಡರ ಆರೋಗ್ಯವೂ ಉತ್ತಮ. ಉದ್ಯೋಗಸ್ಥರು ವ್ಯವಹಾರಸ್ಥರಿಗೆ ವಿಪುಲ‌ ಅವಕಾಶ. ಹಲವು ಕಾಲದಿಂದ ಕಾಡುತ್ತಿರುವ ಜಟಿಲ ಸಮಸ್ಯೆಗೆ ಪರಿಹಾರ. ಶುಭ ಕಾರ್ಯಕ್ಕೊದಗಿದ ವಿಘ್ನ ದೂರ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

೨. ವೃಷಭ:

ವೃತ್ತಿರಂಗದಲ್ಲಿ  ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ  ಸ್ಪರ್ಧೆ. ಗುರುಸಮಾನರ ಅಕಸ್ಮಾತ್ ಭೇಟಿ. ಸಂಗಾತಿಯ ಮನೋತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.

೩.ಮಿಥುನ:

ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ. ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ.  ಜೀವನದಲ್ಲಿಹಿರಿಯರ ಆರೋಗ್ಯದತ್ತ ಗಮನವಿರಲಿ. ಪೂರ್ವ ದಿಕ್ಕಿನಿಂದ  ಶುಭ  ಸಮಾಚಾರ ನಿರೀಕ್ಷೆ. ಗೃಹಿಣಿಯರಿಗೆ ಸಮಾಧಾನ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೪.ಕರ್ಕಾಟಕ:

ನಾಮಸ್ಮರಣೆಯ  ಮೂಲಕ  ಖಿನ್ನತೆಯನ್ನು ತೊಲಗಿಸಿ.  ಉದ್ಯೋಗ, ವ್ಯವಹಾರದಲ್ಲಿ ಯಶಸ್ಸಿನತ್ತ ದಾಪುಗಾಲು. ವೈವಾಹಿಕ  ಜೀವನದಲ್ಲಿ ಸಂತೃಪ್ತಿ. ಪಾಲುದಾರಿಕೆ  ವ್ಯವಹಾರದಲ್ಲಿ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆನಂದ. ಗಣೇಶ ಪಂಚರತ್ನ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

೫. ಸಿಂಹ:

ಕಾರ್ಯತತ್ಪರರಿಗೆ ಶ್ಲಾಘನೆ. ಹೊಸ ಅವಕಾಶಕ್ಕಾಗಿ ಹುಡುಕಾಟ.. ಗೆಳೆಯರಿಂದ ಉಪಯುಕ್ತ ಮಾಹಿತಿ. ಅನಿರೀಕ್ಷಿತ ಧನಾಗಮ.ಗುರುಹಿರಿಯರ ಮಾರ್ಗದರ್ಶನದಿಂದ ಕಾರ್ಯ ಯಶಸ್ವಿ . ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ  ಓದಿ.

೬. ಕನ್ಯಾ:

ಆವಶ್ಯಕತೆಗೆ ಸರಿಯಾಗಿ ಧನಾಗಮ.ದೂರದಿಂದ  ಶುಭವಾರ್ತೆ. ವಾಹನ  ಖರೀದಿ  ಯೋಜನೆ ಮುನ್ನಡೆ.ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಹಿರಿಯರ ಮತ್ತು ಗೃಹಿಣಿಯರ  ಆರೋಗ್ಯ ಗಮನಿಸಿ. ವರ- ವಧು ಅನ್ವೇಷಣೆಯಲ್ಲಿ  ಪ್ರಗತಿ.ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೭.ತುಲಾ:

ಚಿತ್ತ ಚಾಂಚಲ್ಯಕ್ಕೆ  ಎಡೆಗೊಡದಿರಿ. ಪತಿ- ಪತ್ನಿಯರೊಳಗೆ ಪರಸ್ಪರ ಸಹಾಯ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಮಾರ್ಗದರ್ಶನ ಲಭ್ಯ.ಮಕ್ಕಳಿಂದ ಮನೆಯಲ್ಲಿ ಸಂತಸ. ಗಣೇಶ ದ್ವಾದಶನಾಮ ಸ್ತೋತ್ರ, ವೆಂಕಟೇಶ್ವರ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.

೮.ವೃಶ್ಚಿಕ:
ಸತ್ಕರ್ಮಗಳ ಫಲ ಲಭಿಸುವ‌   ಸಮಯ. ಹಿರಿಯರಿಗೆ ಆರೋಗ್ಯ ಉತ್ತಮ. ತಾಳ್ಮೆಯಿಂದ ಕಾರ್ಯದಲ್ಲಿ ಯಶಸ್ಸು. ಪಶ್ಚಿಮ  ದಿಕ್ಕಿಗೆ  ಪಯಣ ಸಂಭವ. ಗೃಹಿಣಿಯರಿಗೆ, ಮಕ್ಕಳಿಗೆ  ಶುಭ. ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಕನಕಧಾರಾ ಸ್ತೋತ್ರ ಓದಿ.

೯. ಧನು:
ಸಮಾಧಾನದ ವರ್ತನೆಯಿಂದ  ಸಕಲ‌ ಕಾರ್ಯಸಿದ್ಧಿ. ವಸ್ತ್ರೋದ್ಯಮಿಗಳಿಗೆ ಲಾಭ. ಉದ್ಯೋಗಸ್ಥರಿಗೆ ಮಂದ ಗತಿಯಲ್ಲಿ ಮುನ್ನಡೆ. ವಿವಾಹ ಮಾತುಕತೆ ಯಶಸ್ವಿ. ಮಕ್ಕಳ ವಿದ್ಯಾಭ್ಯಾಸ ಮುನ್ನಡೆ.ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.


೧೦.ಮಕರ: 

ಅಭಿಪ್ರಾಯ ವ್ಯಕ್ತಪಡಿಸಲು  ಆತುರ ಬೇಡ.  ಉದ್ಯೋಗ, ವ್ಯವಹಾರ ಪ್ರಗತಿ. ಸಾಗರೋತ್ಪನ್ನ ವ್ಯಾಪಾರಿಗಳಿಗೆ ಹೇರಳ  ಲಾಭ. ದೇವತಾರ್ಚನೆಯಲ್ಲಿ  ಆಸಕ್ತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಶುಭ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧. ಕುಂಭ:
 
ಸೇವಾ ಕಾರ್ಯಗಳಲ್ಲಿ ಆಸಕ್ತಿ ಉದ್ಯೋಗಸ್ಥರಿಗೆ ಹುದ್ದೆಯಲ್ಲಿ ಪದೋನ್ನತಿ ಸಂಭವ. ಗೃಹಿಣಿಯರಿಗೆ ದ್ರವ್ಯಲಾಭ. ಉನ್ನತ ವ್ಸಾಸಂಗಾಸಕ್ತರಿಗೆ  ಅನುಕೂಲದ ವಾತಾವರಣ. ಹಿರಿಯರಿಗೆ, ಮಕ್ಕಳಿಗೆ ಸಂತಸದ ವಾತಾವರಣ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ ಶನಿಮಹಾತ್ಮೆ ಓದಿ.


೧೨. ಮೀನ:

ದೂರದ ಸ್ಥಳಕ್ಕೆ ಭೇಟಿ ಸಂಭವ. ಹೊಸ ಕಾರ್ಯಾರಂಭಕ್ಕೆ ವಿಘ್ನ. ಹಳೆಯ ವಿವಾದ ಪರಿಹಾರ.ಕೃಷ್ಯುತ್ಪನ್ನಗಳಿಂದ  ಲಾಭ. ಹಿರಿಯರ, ಗೃಹಿಣಿಯರ,ಮಕ್ಕಳ ಆರೋಗ್ಯ ಸ್ಥಿರ. ರಾತ್ರಿ ಪ್ರಯಾಣ ಮಾಡದಿರಿ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.