ದಿನ ಭವಿಷ್ಯ
25-06-2025

ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ 7
ಮೇಷ:
ಏನೇ ಜವಾಬ್ದಾರಿ ಬಂದರೂ ಹಿಂಜರಿಯದಿರಿ. ಆದಾಯದ ಕೊರತೆಯ ಪ್ರಶ್ನೆ ಇಲ್ಲ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಉತ್ತರಕ್ಕೆ ಪ್ರಯಾಣ. ನೊಂದವರಿಗೆ ಸಹಾಯ ಮಾಡುವ ಅವಕಾಶ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
೨.ವೃಷಭ:
ಉದ್ಯೋಗ ಸ್ಥಾನದ ಸ್ಥಿತಿಗತಿಯಲ್ಲಿ ವ್ಯತ್ಯಾಸ ಇಲ್ಲ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ ಹೆಚ್ಚಳ. ಪ್ರಮುಖ ವ್ಯಕ್ತಿಯೊಡನೆ ವ್ಯವಹಾರ ಮಾತುಕತೆ. ಗಣಪತಿ ಅಥರ್ವಶೀರ್ಷ,ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
೩ಮಿಥುನ:
ಪರೋಪಕಾರದಿಂದ ಸಂತೃಪ್ತಿ, ಸಮಾಧಾನ. ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ.ಪಿತ್ರಾರ್ಜಿತ ಭೂಮಿಯಲ್ಲಿ ಅಭಿವೃದ್ಧಿ ಕಾರ್ಯ. ಎಲ್ಲರಿಗೂ ಉತ್ತಮ ಆರೋಗ್ಯ. ಸಂಕಷ್ಟನಾಶನ ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೪. ಕರ್ಕಾಟಕ:
ವಿವಾದದಲ್ಲಿ ಸಿಲುಕಿಸಲು ವಿರೋಧಿಗಳ ಪ್ರಯತ್ನ. ಉದ್ಯಮಗಳಿಗೆ ನೌಕರರ ಸಮಸ್ಯೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿ ಆಧಾರಿತ ಉದ್ಯಮಕ್ಕೆ ಯಶಸ್ಸು.
ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಸುಬ್ರಹ್ಮಣ್ಯ ಕವಚ, ಮಹಿಷಮರ್ದಿನಿ ಸ್ತೋತ್ರ ಓದಿ.
೫.ಸಿಂಹ:
ಉನ್ನತ ಸಾಧನೆಗಾಗಿ ಸಹೋದ್ಯೋಗಿಗಳಿಂದ ಸಮ್ಮಾನ. ವಸ್ತ್ರೋದ್ಯಮ, ಸ್ವರ್ಣೋದ್ಯಮಕ್ಕೆ ಲಾಭ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಸಾಮಾಜಿಕ ಪಿಡುಗುಗಳ ನಿವಾರಣೆಗೆ ಚಿಂತನೆ. ದೊಡ್ಡ ಪ್ರಮಾಣದ ಹೂಡಿಕೆಗೆ ಕಾಲ ಅಪಕ್ವ. ಗಣಪತಿ ಅಥರ್ವಶೀರ್ಷ, ನರಸಿಂಹ ಕವಚ ಲಕ್ಷ್ಮೀನರಸಿಂಹ ಕರಾವಲಂಬನ ಸ್ತೋತ್ರ, ಕನಕಧಾರಾ ಸ್ತೋತ್ರ ಓದಿ.
೬.ಕನ್ಯಾ:
ಉದ್ಯೋಗ ಸ್ಥಾನದಲ್ಲಿ ಆಹ್ಲಾದದ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಲ್ಲಿ ನಷ್ಟ. ಪಾಲುದಾರಿಕೆ ಉದ್ಯಮದಲ್ಲಿ ಪ್ರಗತಿ. ಅನಿವಾರ್ಯವಾದ ವೈದ್ಯಕೀಯ ವೆಚ್ಚ. ಗಣಪತಿ ಅಥರ್ವಶೀರ್ಷ, ದಕ್ಷಿಣಾಮೂರ್ತಿ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
೭. ತುಲಾ:
ಉದ್ಯೋಗದಲ್ಲಿ ಸಂತೃಪ್ತಿಯ ವಾತಾವರಣ..ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಪಥ್ಯಾಹಾರ ಸೇವನೆ, ಯೋಗ, ಧ್ಯಾನಗಳಿಂದ ಆರೋಗ್ಯ ಪ್ರಾಪ್ತಿ. ಮಹಿಳೆಯರ ನೇತೃತ್ವದ ಉದ್ಯಮಗಳ ಏಳಿಗೆ. ಸಾಮಾಜಿಕ ಸಮಾರಂಭದಲ್ಲಿ ಭಾಗಿ. ಗಣೇಶ ಪಂಚರತ್ನ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೮.ವೃಶ್ಚಿಕ:
ಉದ್ಯೋಗಿಗಳಿಗೆ ಹೆಚ್ಚು ದುಡಿಯಲು ಉತ್ತೇಜನ. ಸರಕಾರಿ ಅಧಿಕಾರಿಗಳಿಗೆ ಆತಂಕದ ಭಾವ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಮಗಳಿಗೆ ದೂರದಿಂದ ನೆಂಟಸ್ತಿಕೆ ಬರುವ ಸಾಧ್ಯತೆ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.
೯.ಧನು:
ಸಹೋದ್ಯೋಗಿಗಳಿಂದ ಸಕಾಲಿಕ ಸಹಾಯ. ಶಿಕ್ಷಿತರಿಗೆ ಒಳ್ಳೆಯ ಸ್ವೋದ್ಯೋಗಾವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ಕುಶಲ ಕರ್ಮಿಗಳಿಗೆ ಉತ್ತಮ ಉದ್ಯೋಗಾವಕಾಶ. ಆಪ್ತಮಿತ್ರನ ಸಲಹೆಯಿಂದ ಲಾಭ. ಗಣೇಶ ಪಂಚರತ್ನ, ದತ್ತಪಂಜರ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
೧೦.ಮಕರ:
ಸಮಯಮಿತಿಯ ಕಾರ್ಯಗಳು ಮುಕ್ತಾಯ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಕನ್ಯೆಯರಿಗೆ ಯೋಗ್ಯ ವರ ಪ್ರಾಪ್ತಿ. ಬಂಧುಗಳೊಂದಿಗೆ ಸಂಬಂಧ ಸುಧಾರಣೆ. ಮಕ್ಕಳ ಕ್ಷೇಮ ಚಿಂತನೆ. ಗಣಪತಿ ಅಥರ್ವಶೀರ್ಷ. ಸುಬ್ರಹ್ಮಣ್ಯ ಭುಜಂಗಸ್ತೋತ್ರ, ನವಗ್ರಹ ಸ್ತೋತ್ತ ಓದಿ
೧೧. ಕುಂಭ:.
ಉದ್ಯೋಗದಲ್ಲಿ ಪ್ರಾವೀಣ್ಯಕ್ಕೆ ಮನ್ನಣೆ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ. ಗಣೇಶ ಕವಚ, ವಿಷ್ಷು ಸಹಸ್ರನಾಮ ಧನಿಮಹಾತ್ಮೆ ಓದಿ.
೧೨. ಮೀನ:
ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು.ಅಪೇಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಸರಕಾರಿ ಇಲಾಖೆಗಳಿಂದ ಸಹಾಯ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.