ದಿನ ಭವಿಷ್ಯ
23-08-2025

ಜ್ಯೋತಿರ್ಮಯ.
ಅದೃಷ್ಟ ಸಂಖ್ಯೆ 5
೧. ಮೇಷ:
ಮುನ್ನೆಚ್ಚರಿಕೆಯೊಂದಿಗೆ ಕಾರ್ಯಕ್ಕೆ ಮೊದಲಾಗಿ. ಉದ್ಯೋಗ, ವ್ಯವಹಾರಗಳಲ್ಲಿ ಮಂದಗತಿ. ಆರ್ಥಿಕ ಸಂಸ್ಥೆ ನೌಕರರಿಗೆ ಅಧಿಕ ಹೊರೆ. ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
೨. ವೃಷಭ:
ಮೊದಲಿಗಿಂತ ಹೆಚ್ಚು ಅನುಕೂಲದ ಪರಿಸ್ಥಿತಿ. ಹಣಕಾಸು ವ್ಯವಹಾರ ಸುಗಮ. ಸರಕಾರಿ ನೌಕರರಿಗೆ ಸಡಿಲಾದ ಆತಂಕ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ. ಗಣೇಶ ಅಷ್ಟಕ, ಕಾರ್ತಿಕೇಯ ಸ್ತೋತ್ರ, ಗುರುಸ್ತೋತ್ರ ಓದಿ.
೩ಮಿಥುನ:
ಪ್ರಾಪಂಚಿಕ ದೃಷ್ಟಿಯಿಂದ ಶುಭಕಾಲ. ಶಾರೀರಿಕ ತೊಂದರೆಗಳಿಗೆ ವಿದಾಯ. ಕಾರ್ಯ ನಿರ್ವಹಣೆ ನಿರಾತಂಕವಾಗಿ ನೆಮ್ಮದಿ. ವ್ಯವಹಾರಸ್ಥರಿಗೆ ಅನುಕೂಲದ ದಿನ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ. ಗಣಪತಿ ಅಥರ್ವಶೀರ್ಷ, ದೇವೀಸ್ತೋತ್ರ, ಆದಿತ್ಯಹೃದಯ ಓದಿ.
೪. ಕರ್ಕಾಟಕ:
ಕಡಿಮೆಯಾದ ಅಶುಭಫಲಗಳು. ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಸುಧಾರಣೆ. ಕಟ್ಟಡ, ನಿವೇಶನ ಖರೀದಿ-ಮಾರಾಟ ವ್ಯವಹಾರಸ್ಥರಿಗೆ ಲಾಭ. ವ್ಯವಹಾರ ಸಂಬಂಧ ಪೂರ್ವಕ್ಕೆ ಪ್ರಯಾಣ. ಗಣೇಶ ದ್ವಾದಶನಾಮ ಸ್ತೋತ್ರ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೫.ಸಿಂಹ:
ಹಂಚಿಕೊಂಡಷ್ಟೂ ವೃದ್ಧಿಯಾಗುವ ಆನಂದ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಸಾಧ್ಯವಾದರೆ ಹತ್ತಿರದ ದೇವಾಲಯಕ್ಕೆ ಹೋಗಿ. ಸಂಕಷ್ಟನಾಶನ ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೬. ಕನ್ಯಾ:
ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಉದ್ಯೋಗಸ್ಥರಿಗೆ ಸಹೋದ್ಯೋಗಿಗಳ ಸಹಾಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಕೊಟ್ಟು ಮರೆತಿದ್ದ ಸಾಲ ಮರಳಿ ಕೈಗೆ. ಗಣೇಶ ಪಂಚರತ್ನ, ವೆಂಕಟೇಶ್ವರ ಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.
೭. ತುಲಾ:
ಬಹಳ ಬಯಸಿ ಆಶೆ ಬಿಟ್ಟಿದ್ದ ಸಹಾಯ ಲಭ್ಯ. ಉದ್ಯೋಗ ಕ್ಷೇತ್ರದಲ್ಲಿ ಬದಲಾದ ಕಾರ್ಯಗಳು. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ ತೃಪ್ತಿಕರ ಲಾಭ. ಹಿರಿಯರಿಗೆ ಉಲ್ಲಾಸದ ವಾತಾವರಣ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.
೮.ವೃಶ್ಚಿಕ:
ಕಾರ್ಯಗಳು ನಿರೀಕ್ಷೆಯಂತೆ ಕೈಗೂಡುವ ದಿನ. ಮಾಲಿಕ- ನೌಕರರ ಬಾಂಧವ್ಯ ವೃದ್ಧಿ. ಆಸ್ತಿ, ಮನೆ ದಳ್ಳಾಳಿಗಳಿಗೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ ಹೆಚ್ಚು ಲಾಭ ಇಲ್ಲ. ಗಿರವಿ ವ್ಯವಹಾರದ ವ್ಯಾಪಾರಿಗಳಿಗೆ, ಸಂಸ್ಥೆಗಳಿಗೆ ಉತ್ತಮ ಲಾಭ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಆದಿತ್ಯಹೃದಯ ಓದಿ.
೯.ಧನು:
ನಿಸ್ವಾರ್ಥ ಮನೋಭಾವದ ದುಡಿಮೆಗೆ ಶುಭಫಲ. ಹೊಂದಾಣಿಕೆ, ಕಾರ್ಯನಿಷ್ಠೆಗಳಿಂದ ಯಶಸ್ಸು. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ನಿವಾಸ ಬದಲಾವಣೆಗೆ ಪೂರ್ವಸಿದ್ಧತೆ. ಮಕ್ಕಳ ಪ್ರತಿಭೆ ವಿಕಾಸಕ್ಕೆ ವ್ಯವಸ್ಥೆ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೧೦.ಮಕರ:
ತಾಳ್ಮೆಯಿಂದ ಯೋಚಿಸಿ ಕೆಲಸ ಮಾಡಿ. ಉದ್ಯೋಗ ಸ್ಥಾನದಲ್ಲಿ ಅನುಕೂಲ ವೃದ್ಧಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ. ಗಣೇಶ ಕವಚ, ರಾಮ ಭುಜಂಗಪ್ರಯಾತ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧. ಕುಂಭ:
ಸವಾಲುಗಳು ಹೆಚ್ಚಾದಷ್ಟೂ ನಿಭಾಯಿಸುವ ಸಾಮರ್ಥ್ಯ.ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಅವಿಶ್ರಾಂತ ಚಟುವಟಿಕೆಗಳಿಂದ ಆಯಾಸ. ಗೃಹೋದ್ಯಮಗಳ ಆದಾಯ ವೃದ್ಧಿ. ಗಣೇಶ ಅಷ್ಟಕ, ಕೃಷ್ಣಾಷ್ಟೋತ್ತರ ಶತನಾಮ ಸ್ತೋತ್ರ, ಶನಿಮಹಾತ್ಮೆ ಓದಿ.
೧೨. ಮೀನ:
ಇನ್ನಷ್ಟು ಹೊಣೆಗಾರಿಕೆಗಳನ್ನು ನಿರೀಕ್ಷಿಸಿರಿ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ. ಸ್ವಂತದ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಹೊಸ ವ್ಯವಹಾರದಲ್ಲಿ ನಿಧಾನ, ಆದರೆ ಸ್ಥಿರವಾದ ಪ್ರಗತಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.