ದಿನ ಭವಿಷ್ಯ
25-08-2025

ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ 7
೧.ಮೇಷ:
ಸಾವಕಾಶವಾಗಿ ಮುಂದೆ ನಡೆಯುತ್ತಿರಿ.ಭಾದ್ರಪದ ಸೋಮವಾರ ಶುಭಪ್ರದ. ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ ಪ್ರತಿಭೆ ಅರಳಲು ಅವಕಾಶ. ಗಣೇಶ ಅಷ್ಟಕ ದೇವೀಸ್ತೋತ್ರ, ಶನಿಮಹಾತ್ಮೆ ಓದಿ.
೨.ವೃಷಭ:
ಜಂಜಾಟದ ನಡುವೆ ನೆಮ್ಮದಿ. ಉದ್ಯೋಗದಲ್ಲಿ ಹೆಚ್ಚು ಸಂತೃಪ್ತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉತ್ಪನ್ನಗಳ ವೈವಿಧ್ಯ ಕಾಯ್ದುಕೊಳ್ಳಲು ಮೇಲಾಟ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿ. ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಆದಿತ್ಯ ಹೃದಯ ಓದಿ.
೩. ಮಿಥುನ:
ಪ್ರಾಮಾಣಿಕತೆಯ ದುರುಪಯೋಗ ಆಗದಿರಲಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮಿಗಳಿಗೆ ಪ್ರಾಮಾಣಿಕತೆ ಕಾಯ್ದುಕೊಳ್ಳಲು ಸವಾಲು. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ. ಅಸ್ವಸ್ಥರಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಗಣೇಶ ಕವಚ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
೪.ಕರ್ಕಾಟಕ:
ಉದ್ಯೋಗ ಸ್ಥಾನದ ಸ್ಥಿತಿಯಲ್ಲಿ ವ್ಯತ್ಯಾಸ ಇಲ್ಲ. ಉದ್ಯಮದ ಉತ್ಪಾದನೆಗಳ ಗುಣಮಟ್ಟ ಉಳಿಸಿಕೊಳ್ಳುವ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಅಲ್ಪಾವಧಿ ಹೂಡಿಕೆ ಬೇಡ. ಕುಟುಂಬದಲ್ಲಿ ಹರ್ಷ, ಉತ್ಸಾಹದ ವಾತಾವರಣ. ಗಣೇಶ ಪಂಚರತ್ನ, ಶಿವಕವಚ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೫_ಸಿಂಹ:
ದೇಹಶ್ರಮ ಹೆಚ್ಚಿದಷ್ಟೂ ಆರೋಗ್ಯವೃದ್ಧಿ. ವ್ಯಾಪಾರ ವೃದ್ಧಿಗೆ ಹೊಸ ಪರಿಚಯಸ್ಥರ ಸಹಾಯ. ಕಟ್ಟಡ ನಿರ್ಮಾಣ ವ್ಯವಹಾರ ವೇಗವೃದ್ಧಿ. ಭೂವ್ಯವಹಾರ ನಡೆಸುವವರಿಗೆ ಅನುಕೂಲ. ದಂಪತಿಗಳ ವಿರಸ ಮುಕ್ತಾಯ. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಗುರುಸ್ತೋತ್ರ ಓದಿ.
೬.ಕನ್ಯಾ:
ಮನೆಯಲ್ಲಿ ಶಾಂತಿ,ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫಲ. ಹಿರಿಯ ನಾಗರಿಕರ ಜೀವನಾಸಕ್ತಿ ವೃದ್ಧಿ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೭ತುಲಾ:
ಪ್ರತಿಕೂಲ ಹವೆಯಿಂದ ಕೊಂಚ ಅನಾರೋಗ್ಯ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಸ್ಥಾನಮಾನ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆಯಿಂದ ಸಮಾಧಾನ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೮.ವೃಶ್ಚಿಕ:
ವಿವಾದಗಳಿಂದ ದೂರವಿದ್ದಷ್ಟು ಕ್ಷೇಮ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದ ವ್ಯಾಪ್ತಿ ಇನ್ನಷ್ಟು ವಿಸ್ತರಣೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಮನಸ್ಸು ಕೆಡಿಸುವ ಮಾತುಗಳನ್ನು ನಿರ್ಲಕ್ಷಿಸಿ. ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಆಂಜನೇಯ ಸ್ತೋತ್ರ ಓದಿ.
೯. ಧನು:
ಎಲ್ಲರ ಮೇಲೆಯೂ ಸಂಶಯ ಪಡದಿರಿ. ಸಹೋದ್ಯೋಗಿಗಳ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳಿಗೆ ಅನುಕೂಲ. ಹೈನುಗಾರಿಕೆ, ಜೇನು ವ್ಯವಸಾಯ ಫಲಪ್ರದ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ. ಗಣೇಶ ಪಂಚರತ್ನ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
೧೦. ಮಕರ:
ಕೆಲಸದ ಒತ್ತಡ ಕೊಂಚ ಸಡಿಲು. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳಿಗೆ ಒಳ್ಳೆಯ ಬೇಡಿಕೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಗಣಪತಿ ಅಥರ್ವಶೀರ್ಷ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಶನಿಸ್ತೋತ್ರ ಓದಿ.
೧೧.ಕುಂಭ:
ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ, ಸ್ಟೇಶನರಿ ವಿತರಕರ ವ್ಯಾಪಾರ ವೃದ್ಧಿ. ಹೊಸ ಪರಿಚಿತರಿಂದ ವ್ಯವಹಾರ ವೃದ್ಧಿಗೆ ಸಹಾಯ. ಗಣೇಶ ಕವಚ,ನರಸಿಂಹ ಕವಚ, ಶನಿಮಹಾತ್ಮೆ ಓದಿ.
೧೨.ಮೀನ:
ಶುಭ ಸೋಮವಾರ ಹೆಚ್ಚು ಅನುಕೂಲ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ವಿಶಿಷ್ಟ ವ್ಯಕ್ತಿಯೊಬ್ಬರ ಭೇಟಿಯಿಂದ ಅನುಕೂಲ.
ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.