ಹಲವು ಸಮುದಾಯಗಳಿಂದ ಆಗ್ರಹ: ಡಿಸಿಎಂ ಡಿ.ಕೆ. ಶಿವಕುಮಾರ್

Nov 23, 2023 - 07:31
Dec 3, 2023 - 10:38
ಹಲವು ಸಮುದಾಯಗಳಿಂದ ಆಗ್ರಹ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. 

ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

“ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು.

ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ” ಎಂದು ತಿಳಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.